ಮೈಸೂರು : ಮೈಸೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಯುವತಿಯ ಪ್ರೀತಿಯ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದೆ. ಇದರಿಂದ ಮನನೊಂದ ಯುವಕ ನಾಗೇಂದ್ರ (23) ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಟಿ ನರಸಿಪುರ ತಾಲೂಕಿನ ಬಿ ಸೀಹಳ್ಳಿ ಗ್ರಾಮದಲ್ಲಿ ನಾಗೇಂದ್ರ ಯುತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಈ ವಿಷಯ ತಿಳಿದು ನಾಗೇಂದ್ರನ ಮೇಲೆ ಯುವತಿಯ ಸಂಬಂಧಿಕರು ಹಲ್ಲೆ ಮಾಡಿದ್ದಾರೆ. ಯುವತಿಯ ಕುಟುಂಬದ ಜಯಕುಮಾರ್ ಮಂಜು ಸೇರಿ ಐವರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದಿದೆ. ಹಲ್ಲೆಯಿಂದ ಅವಮಾನ ಆಗಿದೆ ಎಂದು ಮನನೊಂದು ನಾಗೇಂದ್ರ ಆತ್ಮಹತ್ಯೆಗೆ ಶರಣಾಗಿದ್ದಾನೆ ಈ ಕುರಿತು ನಾಗೇಂದ್ರ ಪೋಷಕರು ಬನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಮಗನ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸುತ್ತಿದ್ದಾರೆ.








