ಉತ್ತರಕನ್ನಡ : ಕಾರವಾರದ ಕರಾವಳಿ ಉತ್ಸವದಲ್ಲಿ ಭಾಗವಹಿಸಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರಾವಳಿಯನ್ನು ಪ್ರವಾಸೋದ್ಯಮ ಹಬ್ ಆಗಿ ಅಭಿವೃದ್ಧಿಪಡಿಸುವುದು ಎಂದು ಭರವಸೆ ನೀಡಿದರು. ಅಲ್ಲದೆ, ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣ ಮತ್ತು ನದಿ ಜೋಡಣೆಗೆ ಡಿಪಿಆರ್ ಘೋಷಣೆ ಮಾಡಿದರು.
ನಿನ್ನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾನುವಾರ ಭಾಗವಹಿಸಿದರು. ಇದೇ ಸಮಾರಂಭದಲ್ಲಿ ಉತ್ತರ ಕನ್ನಡಕ್ಕೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಮಂಗಳೂರು, ಉಡುಪಿ ಮತ್ತು ಕಾರವಾರದ ಸುಮಾರು 300 ಕಿಮೀ ಉದ್ದದ ಕರಾವಳಿ ತೀರವನ್ನು ಪ್ರವಾಸೋದ್ಯಮದ ಹಬ್ ಆಗಿ ಪರಿವರ್ತಿಸಲು ಸರ್ಕಾರ ಹೊಸ ಟೂರಿಸಂ ಪಾಲಿಸಿ ಜಾರಿಗೆ ತರಲಿದೆ ಎಂದು ತಿಳಿಸಿದ್ದಾರೆ.
ಇದೆ ವೇಳೆ ಕರಾವಳಿ ಉತ್ಸವದಲ್ಲಿ ಡಿ.ಕೆ.ಶಿವಕುಮಾರ್ ಅವರಿಗೆ, ಜಿಲ್ಲಾಡಳಿತ ವತಿಯಿಂದ ಶಾಸಕ ಸತೀಶ್ ಸೈಲ್, ವಿಷ್ಣುವಿನ ವಿಶ್ವರೂಪ ದರ್ಶನ ಬಿಂಬಿಸುವ 16 ಲಕ್ಷ ರೂಪಾಯಿ ಮೌಲ್ಯದ ಶ್ರೀಗಂಧದ ವಿಗ್ರಹ ಉಡುಗೊರೆಯಾಗಿ ನೀಡಿದರು. ಡಿಸಿಎಂ ಅವರ ಮನಸ್ಸಿನಲ್ಲಿರುವ ಎಲ್ಲಾ ಬಯಕೆ ಈಡೇರಲೆಂದು ಆಶಿಸುವುದಾಗಿ ತಿಳಿಸಿದರು.
ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 210 ಕೋಟಿ ಮೊತ್ತದ ಪ್ರಸ್ತಾವನೆ ಸಲ್ಲಿಸಿದ್ದು, ಆಧುನಿಕ ಸೌಲಭ್ಯವುಳ್ಳ ಹೊಸ ಕಟ್ಟಡ ನಿರ್ಮಿಸುವುದಾಗಿ ಘೋಷಿಸಿದರು. ಇದೆ ವೇಳೆ ಶರಾವತಿ ಯೋಜನೆ ಮತ್ತು ವರದಾ ಹಾಗೂ ಬೇಡ್ತಿ ನದಿ ಜೋಡಣೆಗೆ ಡಿಪಿಆರ್ ಸಿದ್ಧಪಡಿಸಲು ಚೀಫ್ ಇಂಜಿನಿಯರ್ಗೆ ನೀಡಿರುವುದಾಗಿ ನೀಡಿರುವುದಾಗಿ ತಿಳಿಸಿದರು.








