ಚಾಮರಾಜನಗರ : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಇತ್ತೀಚೆಗೆ ಗೋಕಾಕದಲ್ಲಿ ಲಕ್ಷ್ಮಿ ದೇವಿ ಜಾತ್ರೆಯಲ್ಲಿ ಕರ್ತವ್ಯನಿರತ ಎ ASI ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿದ್ದರು. ಇದೀಗ ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ (ASI) ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ ಡ್ಯೂಟಿ ಮುಗಿಸಿ ಬೆಳಗ್ಗೆ ಮನೆಗೆ ಬಂದಿದ್ದರು. ಈ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ASI ಕೊನೆಯುಸಿರೆಳೆದಿದ್ದಾರೆ.
ನಗರದ ಪೊಲೀಸ್ ಗೃಹದಲ್ಲಿ ವಾಸವಿದ್ದ ಮನೆಯಲ್ಲಿ ಕುಸಿದು ಬಿದ್ದು ಎಎಸ್‌ಐ ನಾಗನಾಯಕ ಮೃತಪಟ್ಟಿದ್ದಾರೆ








