ಬೆಂಗಳೂರು: ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಾಗಿದ್ದಂತ ಪ್ರಕರಣವನ್ನು ಕೈಬಿಟ್ಟಿದೆ. ಅಲ್ಲದೇ ಕೇಸ್ ರದ್ದುಗೊಳಿಸಿ, ಬಿಗ್ ರಿಲೀಫ್ ನೀಡಿದೆ..
ಈ ಕುರಿತಂತೆ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಿಚಾರಣೆ ನಡೆಸಿ, ಇಂದು ಆದೇಶ ಪ್ರಕಟಿಸಿದೆ. ಈ ಪ್ರಕರಣದಲ್ಲಿ ವಿಳಂಬವಾಗಿ ದೂರು ದಾಖಲಾಗಿದೆ ಎಂಬ ಕಾರಣ ನೀಡಿ, ಕೋರ್ಟ್ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ಹೊಳೆನರಸೀಪುರದ ಸಂತ್ರಸ್ತೆ ಸಲ್ಲಿಸಿದ್ದಂತ ಪ್ರಕರಣವನ್ನು ರದ್ದುಗೊಳಿಸಿದೆ.
ಅಂದಹಾಗೆ ಮಹಿಳೆ ನೀಡಿದ್ದಂತ ದೂರಿನ ಹಿನ್ನಲೆಯಲ್ಲಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಐಪಿಸಿ ಸೆಕ್ಷನ್ 354ಎ ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಎಸ್ಐಟಿ ಅಧಿಕಾರಿಗಳು ಇದರ ತನಿಖೆ ನಡೆಸುತ್ತಿದ್ದರು. ಈ ಮಧ್ಯೆ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದರು.
ಈ ಪ್ರಕರಣ ಸಂಬಂಧ ವಾದ-ಪ್ರತಿವಾದವನ್ನು ಆಲಿಸಿದಂತ ಕೋರ್ಟ್, ಪ್ರಕರಣದ ವಿಚಾರಣೆಯೂ ಕೂಡ ತಡವಾಗಿದೆ ಎಂಬ ಕಾರಣ ನೀಡಿ, ರೇವಣ್ಣ ಅವರನ್ನು ಪ್ರಕರಣದಿಂದ ಕೈಬಿಟ್ಟಿದೆ. ಈ ಮೂಲಕ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ.
ಮಕ್ಕಳಿಗೆ ದೃಷ್ಠಿ ತೆಗೆಯೋ ಹಿಂದಿನ ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ
ದಾವಣಗೆರೆ: ನಾಳೆ ಹೊನ್ನಾಳಿ ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut








