ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್ ಪ್ರವೇಶಕ್ಕೆ 3ನೇ ಸ್ಟ್ರೇ ವೇಕೆನ್ಸಿ ಸುತ್ತಿನಲ್ಲಿ ಖಾಲಿ ಇದ್ದ ಎಲ್ಲ ಎಂಟು ಸೀಟುಗಳು ಅರ್ಹರಿಗೆ ಮೆರಿಟ್ ಆಧಾರದ ಮೇಲೆ ಹಂಚಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಸೀಟು ಹಂಚಿಕೆಯಾದವರ ಪಟ್ಟಿಯನ್ನು ಕೆಇಎ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಡಿ.30ರಂದು ಸಂಬಂಧಪಟ್ಟ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ಈ ಮೂಲಕ ಪ್ರಸಕ್ತ ಸಾಲಿನ ವೈದ್ಯಕೀಯ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು ಎಲ್ಲ ಸೀಟು ಗಳು ಖಾಲಿಯಾದಂತಾಗಿವೆ ಎಂದು ಅವರು ತಿಳಿಸಿದ್ದಾರೆ.
ಹೊಸಕೋಟೆಯ ಎಂವಿಜೆ ವೈದ್ಯಕೀಯ ಕಾಲೇಜಿನಲ್ಲಿ 5, ಕಲ್ಬುರ್ಗಿಯ ಎಂಆರ್ ಎಂಸಿ ವೈದ್ಯಕೀಯ ಕಾಲೇಜಿನಲ್ಲಿ 2 ಹಾಗೂ ಧಾರವಾಡದ ಎಸ್ ಡಿ ಎಂ ವೈದ್ಯಕೀಯ ಕಾಲೇಜಿನಲ್ಲಿ ಒಂದು ಸೀಟು ಖಾಲಿ ಇತ್ತು. ಇಷ್ಟೂ ಸೀಟುಗಳು ಹಂಚಿಕೆಯಾಗಿವೆ ಎಂದರು.








