ತುಮಕೂರು : ಕಳೆದ ಶನಿವಾರ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳದಲ್ಲಿ ತಾಯಿ ಮಗ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಪರಪುರುಷನ ಸಹವಾಸ ಮಾಡಿದ್ದಕ್ಕೆ, ಆತ ಅಕ್ರಮ ಸಂಬಂಧದ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಬ್ಲಾಕ್ ಮೇಲ್ ಗೆ ಹೆದರಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಶನಿವಾರ 8 ವರ್ಷದ ಮಗುವಿನ ಜೊತೆಗೆ ಕೆರೆಗೆ ಹಾರಿ ಹಂಸಲೇಖ ಆತ್ಮಹತ್ಯೆಗೆ ಶರಣಾಗಿದ್ದರು. ಮಲ್ಲಿಕಾರ್ಜುನ ಎಂಬಾತನ ಜೊತೆಗೆ ಹಂಸಲೇಖ ಅಕ್ರಮ ಸಂಬಂಧ ಹೊಂದಿದ್ದಳು. ಈ ವೇಳೆ ಮಲ್ಲಿಕಾರ್ಜುನ ಅಕ್ರಮ ಸಂಬಂಧದ ವಿಡಿಯೋ ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಪುತ್ರ ಗುರುಪ್ರಸಾದ್ ಜೊತೆಗೆ ಹಂಸಲೇಖ ಮನೆ ಬಿಟ್ಟು ಹೋಗಿದ್ದರು.
ಶುಕ್ರವಾರ ಸ್ನೇಹಿತೆಯ ಮನೆಯಲ್ಲಿ ಉಳಿದುಕೊಂಡಿದ್ದು ಶನಿವಾರ ತನ್ನ 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಮಾಡಿಕೊಂಡಿದ್ದರು ಘಟನೆ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಮಲ್ಲಿಕಾರ್ಜುನ್ ಎಂಬತನ ವಿರುದ್ಧ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ. ಆತ್ಮಹತ್ಯೆಗೆ ಪ್ರೇರಣೆ ನೀಡಿದ ಆರೋಪದ ಅಡಿ ಕೇಸ್ ದಾಖಲಾಗಿದೆ.








