ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಹೊಸ ವರ್ಷದ ವೇಳೆ ಫಲಾನುಭವಿಗಳ ಖಾತೆಗೆ ಒಂದು ಕಂತಿನ ಹಣ ಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಗೃಹಲಕ್ಷ್ಮಿ ಫಲಾನುಭವಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಹೌದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದಂತೆ ಹೊಸ ವರ್ಷಕ್ಕೆ ಯಜಮಾನಿಯರಿಗೆ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದೆ.ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ 2000 ರೂ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಆದರೆ ಬೆಳಗಾವಿ ಜಿಲ್ಲೆಯ ಹಲವು ಮಹಿಳೆಯರ ಖಾತೆಗೆ ಜಮಾ ಆಗಿದೆ. ಈ ಹಿನ್ನೆಲೆ ಮಹಿಳೆಯರು ಸಂತಸ ವ್ಯಕ್ತಪಡಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯಡಿ ಹಣ ತಿಂಗಳಿಗೊಮ್ಮೆ ಬಿಡುಗಡೆಯಾಗಬೇಕಾಗಿದ್ದರೂ, ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದಾಗಿ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ. ಫೆಬ್ರವರಿ – ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.








