ಬೆಂಗಳೂರು : ಆದಾಯಕ್ಕೂ ಮೀರಿ ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನೆಲೆಯಲ್ಲಿ ಬಿಡಿಎ ನೌಕರ ವೆಂಕಟೇಶ ನಿವಾಸದ ಮೇಲೆ ಇದೀಗ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಬಿಡಿಎ ನೌಕರ ವೆಂಕಟೇಶ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳಿಗ್ಗೆಯಿಂದ ಸುಮಾರು 10ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಆದಾಯ ಮೇರಿ ಆಸ್ತಿಗಳಿಗಕೆ ಸೇರಿದಂತೆ ಹಲವು ಆರೋಪ ಕೇಳಿ ಬಂದಿತ್ತು. ಹೀಗಾಗಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದ ಅಧಿಕಾರಿಗಳ ತಂಡದಿಂದ ದಾಳಿ ನಡೆದಿದೆ.








