ಬೆಂಗಳೂರು : ರಾಜ್ಯದ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭವಿಷ್ಯ ನಿಧಿ ಯೋಜನೆಯನ್ನು ಅನುಷ್ಠಾನಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ. ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪ 30 ಗ್ರಾಪಂಸಿ 2008, ದಿನಾಂಕ:31.10.2008ರನ್ವಯ ರಾಜ್ಯದಲ್ಲಿನ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ದಿನಾಂಕ:01.11.2008ರಿಂದ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ.
ಆದರೆ, ಸರ್ಕಾರದ ಸದರಿ ಆದೇಶದನ್ವಯ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಉಡುಪಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾತ್ರವೇ ಸಂಪೂರ್ಣವಾಗಿ ಅನುಷ್ಠಾನಗೊಳಿಸಿದ್ದು ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾಗಷವಾಗಿ ಈ ಯೋಜನೆಯನ್ನು ಜಾರಿಗೊಳಿಸಿರುವುದು ಕಂಡು ಬರುತ್ತದೆ. ರಾಜ್ಯದ ಉಳಿದ ಜಿಲ್ಲೆಗಳ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮವಹಿಸದಿರುವುದು ಸರ್ಕಾರದ ಗಮನಕ್ಕೆ ಬಂದಿರುತ್ತದೆ. ಆದ್ದರಿಂದಾಗಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಅರ್ಹರಿರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಒದಗಿಸುವ ಕುರಿತು ಕ್ರಮವಹಿಸಿ, ಆಯುಕ್ತಾಲಯಕ್ಕೆ ಮಾಹಿತಿ ನೀಡುವಂತೆ ಹಾಗೂ ಈ ವಿಷಯವನ್ನು ಜಿಲ್ಲಾ ಪಂಚಾಯಿತಿ ಹಂತದಿಂದ ಮೇಲ್ವಿಚಾರಣೆ ನಡೆಸುವಂತೆ ಈ ಮೂಲಕ ತಿಳಿಸಲಾಗಿದೆ.









