ಬೆಂಗಳೂರು : ರಾಜ್ಯ ಸರ್ಕಾರವು ಸಾರಿಗೆ ನೌಕರರ ಮುಷ್ಕರಕ್ಕೆ ಬ್ರೇಕ್ ಹಾಕಿದ್ದು, ಹೊಸ ವರ್ಷದ ಮೊದಲ ದಿನವೇ ರಾಜ್ಯ ಸರ್ಕಾರ ಸಾರಿಗೆ ನೌಕರರ ಮುಷ್ಕರ ನಡೆಸದಂತೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆಗೆ ಸಜ್ಜಾಗಿದ್ದ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರವು ಎಸ್ಮಾ ಅಸ್ತ್ರ ಪ್ರಯೋಗಿಸಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮುಂದಿನ 6 ತಿಂಗಳವರೆಗೆ ಯಾವುದೇ ಮುಷ್ಕರ ನಡೆಸದಂತೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.
ರಾಜ್ಯ ಸರ್ಕಾರವು 2026 ರ ಜನವರಿ 1 ರಿಂದ ಮುಂದಿನ 6 ತಿಂಗಳವರೆಗೆ ಮುಷ್ಕರ ನಡೆಸದಂತೆ ಅಧಿಸೂಚನೆ ಹೊರಡಿಸಿದೆ. ಇದಕ್ಕೂ ಮುನ್ನ ನೀಡಿದ್ದ ಅಧಿಸೂಚನೆ 2025 ರ ಡಿ.31 ಕ್ಕೆ ಕೊನೆಯಾದ ಹಿನ್ನೆಲೆ ಈಗ ಮುಷ್ಕರ ನಿರ್ಬಂಧಿಸಿ ಆದೇಶ ಹೊರಡಿಸಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿದ್ದಲ್ಲಿ ಎಸ್ಮಾ ಜಾರಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.








