ಬೆಂಗಳೂರು: ಅಂತರ ನಿಗಮ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಕೆ ಎಸ್ ಆರ್ ಟಿ ಸಿ ನೌಕರರಿಗೆ ಗುಡ್ ನ್ಯೂಸ್ ಎನ್ನುವಂತೆ, ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ಆರಂಭಗೊಳ್ಳಲಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರವು ಆದೇಶ ಸಂಖ್ಯೆ: ಟಿಡಿ 45 ಟಿಸಿಎಸ್ 2020, ದಿನಾಂಕ:09-03-2021, ಟಿಡಿ 45 ಟಿಸಿಎಸ್ 2020, ದಿನಾಂಕ:23-03-2021 ಹಾಗೂ ಟಿಡಿ 45 ಟಿಸಿಎಸ್ 2020, ದಿನಾಂಕ:18-01-2025 ರನ್ವಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ನಿಗಮ, ಕ.ಕ.ರ.ಸಾ.ನಿಗಮ ಮತ್ತು ವಾ.ಕ.ರ.ಸಾ.ನಿಗಮಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿದೆ ಎಂದಿದೆ.
ತತ್ಸಂಬಂದ, ಕ.ರಾ.ರ.ಸಾ.ನಿಗಮವು ಸುತ್ತೋಲೆ ಸಂಖ್ಯೆ:1690 ದಿನಾಂಕ:26-03-2021 ಮತ್ತು ಸುತ್ತೋಲೆ ಸಂಖ್ಯೆ: 1736 ದಿನಾಂಕ: 18.06.2025 ರಲ್ಲಿ ವರ್ಗಾವಣೆ ನಿರ್ದೇಶನಗಳನ್ನು ನೀಡಲಾಗಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ದಿನಾಂಕ: 01-01-2026ರ ಇಂದಿನಿಂದ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಲಿದೆ ಎಂದು ತಿಳಿಸಿದೆ.








