ಶಿವಮೊಗ್ಗ: ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ: 04.01.2026 ರಂದು ಸಾಗರ ನಗರ, ಗ್ರಾಮೀಣ ಪ್ರದೇಶದ ಈ ಕೆಲ ಭಾಗಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಕುರಿತಂತೆ ಸಾಗರದ ಮೆಸ್ಕಾಂ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 04.01.2026 ರ ಭಾನುವಾರದಂದು 110/33/II ಕೆವಿ ಸಾಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 06:00 ಘಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂದಿದ್ದಾರೆ.
ದಿನಾಂಕ 04.01.2026 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್, ಎಫ್-7 ಮಂಗಳಬೀಸು ಇಂಡಸ್ಟ್ರಿಯಲ್ ಏರಿಯಾ, ಎಫ್-8 ಮಾರಿಕಾಂಬ, ಎಫ್-13 ರಾಮನಗರ ಇಂಡಸ್ಟ್ರಿಯಲ್ ಏರಿಯಾ, ಎಫ್-15 ಆರ್.ಎಂ.ಸಿ, ಎಫ್-7 ಎಸ್.ಎನ್.ನಗರ, ಮತ್ತು ಗ್ರಾಮೀಣ ವ್ಯಾಪ್ತಿಯ ಎಫ್-2 ಮಾಲ್ವೆ, ಎಫ್-3 ಹೆಗ್ಗೋಡು, ಎಫ್-4 ಆವಿನಹಳ್ಳಿ, ಎಫ್-5 ವದಹಳ್ಳಿ, ಎಫ್-6 ಬೊಮ್ಮತ್ತಿ, ಎಫ್-9 ಮಾಸೂರು ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ ಎಂದು ತಿಳಿಸಿದ್ದಾರೆ.
ಎಫ್-14 ಹಿರೇನೆಲ್ಲೂರು ಹಾಗೂ ಎಫ್-16 ಲಿಂಗದಹಳ್ಳಿ ಮಾರ್ಗದದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಸಾಗರ ಪಟ್ಟಣ, ಆವಿನಹಳ್ಳಿ, ಹೆಗ್ಗೋಡು, ಭೀಮನಕೋಣೆ, ಯಡಜಿಗಳಮನೆ, ಕಲ್ಮನೆ, ಮಾಲ್ವೆ ಭೀಮನೇರಿ, ಕೆಳದಿ, ಮಾಸೂರು, ಹಿರೇನೆಲ್ಲೂರು, ಪಡವಗೋಡು, ನಾಡಕಲಸಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..
ನಾಳೆಯಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು ಹರಿಸಲು ನಿರ್ಣಯ: ಸಚಿವ ಮಧು ಬಂಗಾರಪ್ಪ
ದೇಶಕ್ಕೆ ಮಾದರಿಯಾದ ‘BTM ವಿಧಾನಸಭಾ ಕ್ಷೇತ್ರ’: Solid Waste Management ಯಶಸ್ವಿಯಾಗಿ ಅನುಷ್ಠಾನ








