ಬೆಂಗಳೂರು: ಬಳ್ಳಾರಿಯಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆಯ ಮೇಲೆ ಫೈರಿಂಗ್ ಹಾಗೂ ಕಾಂಗ್ರೆಸ್ ಕಾರ್ಯಕರ್ತನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಘಟನೆಯ ಸಂಬಂಧ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಬಳ್ಳಾರಿ ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಆಗಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ. ಈ ಘಟನೆಯ ಕುರಿತಂತೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿಯನ್ನು ನೀಡಿಲ್ಲ. ಈ ಎಲ್ಲಾ ಕಾರಣದಿಂದಾಗಿ ಬಳ್ಳಾರಿಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಂತ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಆದೇಶಿಸಿದೆ.
ಅಂದಹಾಗೇ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಅವರು ನಿನ್ನೆಯಷ್ಟೇ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 2016ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿ ಪವನ್ ನೆಜ್ಜೂರ್ ಆಗಿದ್ದಾರೆ. ಅವರನ್ನು ಕರ್ತವ್ಯ ಲೋಪದ ಹಿನ್ನಲೆಯಲ್ಲಿ ಇಂದು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.









