ತುಮಕೂರು : ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣದಲ್ಲಿ ಫೈರಿಂಗ್ ಆಗಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ SP ಪವನ್ ನಜ್ಜುರು ಅವರನ್ನು ಕರ್ತವ್ಯ ಲೋಪ ಆರೋಪದ ಅಡಿ ಸಸ್ಪೆಂಡ್ ಮಾಡಲಾಗಿತ್ತು ಇದೀಗ ಮಾತ್ರೆ ನುಂಗಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಹೌದು ಸಸ್ಪೆಂಡ್ ಆಗಿದ್ದ ಎಸ್ಪಿ ಪವನ್ ನಜ್ಜುರ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಎನ್ನುವ ಸುದ್ದಿ ಹರಿದಾಡುತ್ತಿದ್ದು, ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ ತುಮಕೂರು ಜಿಲ್ಲೆಯ ಶಿರದ ಬರಗೂರಿನ ಫಾರ್ಮರ್ಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಸದ್ಯ ಆಸ್ಪತ್ರೆಯಲ್ಲಿ ಪವನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.








