ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳೀಸೋ ಕೃತ್ಯ ನಡೆದಿದ್ದು, ನಿಧಿಗಾಗಿ ದತ್ತು ಪೋಷಕರಿಂದ ಮಗುವನ್ನು ಬಲಿ ಕೊಡಲು ಯತ್ನಿಸಿರುವ ಘಟನೆ ಸೂಲಿಬೆಲೆಯಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಸೂಲೆಬೆಲೆಯ ಜನತಾ ಕಾಲೋನಿಯಲ್ಲಿ ನಿಧಿಗಾಗಿ ಮನೆಯಲ್ಲಿ ಗುಂಡಿ ತೋಡಿ ಮಗು ಬಲಿಗಾಗಿ ಪೂಜೆ ಮಾಡುತ್ತಿದ್ದ ಆರೋಪ ಕೇಳಿ ಬಂದಿದೆ. ಈ ವೇಳೆ 8 ತಿಂಗಳ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.
ಸೈಯದ್ ಇಮ್ರಾನ್ ಎಂಬುವರ ಮನೆಯಲ್ಲಿ ನಿಧಿಗಾಗಿ ಮಗು ಬಲಿ ಪೂಜೆ ನಡೆಸಲಾಗುತ್ತಿತ್ತು ಎನ್ನಲಾಗಿದ್ದು, ಬೇರೆಯವರಿಂದ ಗಂಡು ಮಗುವನ್ನು ಖರೀದಿ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.ಹುಣ್ಣಿಮೆ ಹಿನ್ನೆಲೆ ಮಗು ಬಲಿ ಕೊಡುತ್ತಿದ್ದಾರೆಂದು ಅಪರಿಚಿತರು ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಕರೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಮನೆಯನ್ನು ಪರಿಶೀಲಿಸಿದಾಗ ಮನೆಯ ಕೋಣೆಯಲ್ಲಿ ಗುಂಡಿ ತೆಗೆದು ಪೂಜೆ ಮಾಡಿದ್ದು ಪತ್ತೆಯಾಗಿದೆ. ಸದ್ಯ ಅಧಿಕಾರಿಗಳು ಮಗುವನ್ನು ಶಿಶುಕೇಂದ್ರಕ್ಕೆ ರವಾನಿಸಿ ತನಿಖೆ ಮಾಡುತ್ತಿದ್ದಾರೆ. ಸೂಲೆಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.








