ಬಳ್ಳಾರಿ : ಬಳ್ಳಾರಿ ಘರ್ಷಣೆಗೆ ಸಂಬಂಧಿಸಿದಂತೆ ಶಾಸಕ ಜನಾರ್ದನ ರೆಡ್ಡಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ ಪತ್ರ ಬರೆದು, ತಮಗೆ Z + ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ.
ಜನಾರ್ದನ ರೆಡ್ಡಿ ಅವರು ಪತ್ರದಲ್ಲಿ, ನಮಗೆ ಪ್ರಾಣಭೀತಿ ಇದೆ ದಯವಿಟ್ಟು ನಮಗೆ ರಕ್ಷಣೆ ನೀಡಿ, Z ಶ್ರೇಣಿಯ ರಕ್ಷಣೆ ಕೊಡಿ ಹಾಗೂ ಶಾಸಕ ನಾರಾ ಭರತ್ ರೆಡ್ಡಿ, ಸತೀಶ್ ರೆಡ್ಡಿ ಬಂಧನಕ್ಕೂ ಮನವಿ ಮಾಡಿದ್ದಾರೆ. ಜೊತೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ.
ಒಂದು ವೇಳೆ ರಾಜ್ಯ ಸರ್ಕಾರ ಭದ್ರತೆ ನೀಡದಿದ್ದರೆ, ಇನ್ಮುಂದೆಯೂ ದಾಳಿ ನಡೆದ್ರೆ ಸರ್ಕಾರವೇ ಹೊಣೆ ಎಂದು ಪತ್ರದಲ್ಲಿ ಶಾಸಕ ಜನಾರ್ದನ ರೆಡ್ಡಿ ಉಲ್ಲೇಖಿಸಿದ್ದಾರೆ.








