ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ನಡೆದಿತ್ತು. ಈ ಗುಂಡಿನ ದಾಳಿಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾಗಿದ್ದನು. ಈ ಘಟನೆ ಸಂಬಂಧ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಬಂಧಿಸಲಾಗಿದೆ.
ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆಗೆ ಕೈ ಕಾರ್ಯಕರ್ತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದಾಗ ಸ್ಥಳದಲ್ಲಿದ್ದ 9 ಗನ್ ಮ್ಯಾನ್ ಗಳ ಪೈಕಿ ಓರ್ವನನ್ನು ಬಂಧಿಸಲಾಗಿದೆ. ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗುರುಚರಣ್ ಸಿಂಗ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್ ಮ್ಯಾನ್ ಗಳಾದ ಬಲ್ಜಿತ್ ಸಿಂಗ್, ಮಹೇಂದ್ರ ಸಿಂಗ್, ಗುರುಚರಣ್ ಸಿಂಗ್, ಶಾಸಕ ಭರತ್ ರೆಡ್ಡಿ ಸರ್ಕಾರಿ ಗನ್ ಮ್ಯಾನ್ ಬಸವರಾಜ್, ಶಾಸಕ ಜನಾರ್ದನ ರೆಡ್ಡಿಯ ನಾಲ್ವರು ಸರ್ಕಾರಿ ಗನ್ ಮ್ಯಾನ್, ಮಾಜಿ ಸಚಿವ ಬಿ.ಶ್ರೀರಾಮುಲು ಗನ್ ಮ್ಯಾನ್ ವಶಕ್ಕೆ ಪಡೆಯಲಾಗಿದೆ. ಈವರೆಗೆ ಒಟ್ಟು 9 ಗನ್ ಮ್ಯಾನ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಜನಾರ್ಧನ ರೆಡ್ಡಿ ಅಮೇರಿಕಾದಿಂದ ಸೆಕ್ಯೂರಿಟಿ ತರಿಸಿಕೊಳ್ಳಲಿ, ಬೇಡ ಅಂದವರು ಯಾರು?: ಡಿಸಿಎಂ ಡಿಕೆಶಿ
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ-ಸಿಎಂ ಸಿದ್ದರಾಮಯ್ಯ








