ನವದೆಹಲಿ: ರಿಕ್ಟರ್ ಮಾಪಕದಲ್ಲಿ 5.1 ತೀವ್ರತೆಯ ಭೂಕಂಪ ಅಸ್ಸಾಂನ ಮೋರಿಗಾಂವ್ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ.
ಭಾರತೀಯ ಕಾಲಮಾನ ಬೆಳಗಿನ ಜಾವ 4.17ಕ್ಕೆ ಭೂಕಂಪನ ಸಂಭವಿಸಿದ್ದು, ಭೂಕಂಪನ ಕೇಂದ್ರಬಿಂದು 26.37 ಡಿಗ್ರಿ ಉತ್ತರ ಅಕ್ಷಾಂಶ ಮತ್ತು 92.29 ಡಿಗ್ರಿ ಪೂರ್ವ ರೇಖಾಂಶದಲ್ಲಿ 50 ಕಿ.ಮೀ ಆಳದಲ್ಲಿದೆ. ಮೋರಿಗಾಂವ್ನಲ್ಲಿ ಭೂಕಂಪನ ಸಂಭವಿಸಿದೆ, ಆದರೆ ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳು ಹೊರಬಂದಿಲ್ಲ








