ಬಳ್ಳಾರಿ : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದು ಫೈರಿಂಗ್ ವೇಳೆ ಓರ್ವ ಕಾಂಗ್ರೆಸ್ ಕಾರ್ಯಕರ್ತ ಬಲಿಯಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬಿಜೆಪಿ ಹಾಗೂ ಕಾಂಗ್ರೆಸ್ನ ಒಟ್ಟು 26 ಕಾರ್ಯಕರ್ತರನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಇದುವರೆಗೂ 6 ಎಫ್ಐಆರ್ ಗಳು ದಾಖಲಾಗಿವೆ.
ಬಳ್ಳಾರಿ ನಗರದ ವಾಲ್ಮೀಕಿ ವೃತ್ತ ಹಾಗೂ ಮಹರ್ಷಿ ಪುತ್ಥಳಿ ಉದ್ಘಾಟನಾ ಸಮಾರಂಭದ ನಿಮಿತ್ತ ಕಟ್ಟಲಾದ ಬ್ಯಾನರ್ಸ್, ಬಂಟಿಂಗ್ಸ್ ವಿಚಾರವಾಗಿ ಗಲಭೆ ನಡೆದು ಕಲ್ಲು ತೂರಾಟವಾಗಿತ್ತು. ಖಾಸಗಿ ಅಂಗರಕ್ಷಕರು ಗುಂಡು ಹಾರಿಸಿದ್ದರು. ಈ ವೇಳೆ ರಾಜಶೇಖರ್ ರೆಡ್ಡಿ ಎಂಬವರು ಮೃತಪಟ್ಟಿದ್ದರು. ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರೂ ಗಾಯಗೊಂಡಿದ್ದರು. ಈ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು 6 ಎಫ್‌ಐಆರ್ ದಾಖಲಿಸಿಕೊಂಡಿದ್ದು, ತನಿಖೆ ತೀವ್ರಗೊಳಿಸಿದ್ದಾರೆ.








