ಬೆಂಗಳೂರು : ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸೈಟ್ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರು ವಿಚಾರಣೆ ನಡೆಯಲಿದೆ.
ಮೈಸೂರಿನ ಮುಡಾ ಹಗರಣದ ಸಂಬಂಧ ತನಿಖಾಧಿಕಾರಿ ಮೊದಲ ವರದಿ ಸಲ್ಲಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಗೆ ಸೈಟ್ ಹಂಚಿಕೆ ಹಿನ್ನೆಲೆ, ತನಿಖಾಧಿಕಾರಿ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದು, ಈ ಒಂದು ಬಿ ರಿಪೋರ್ಟ್ ಪ್ರಶ್ನಿಸಿ, ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ಕೂಡ ಇಂದು ವಿಚಾರಣೆ ನಡೆಯಲಿದೆ. ಅಲ್ಲದೆ ತನಿಖಾಧಿಕಾರಿ ವಿರುದ್ಧ ನ್ಯಾಯಾಂಗ ನಿಂದನೆ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟಿಗೆ ಸ್ನೇಹಮಯಿ ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಎರಡು ವಿಚಾರಣೆಗಳು ಇಂದು ನಡೆಯಲಿದೆ.








