ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಒಟ್ಟು 622 ಹುದ್ದೆಗಳ ನೇಮಕಾತಿ ಸಂಬಂಧ ಡಿ.27 ಮತ್ತು 28ರಂದು ನಡೆದ ಮರು ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
ಪರೀಕ್ಷೆ ನಡೆದು ಕೇವಲ ಎಂಟು ದಿನಗಳಲ್ಲೇ ಫಲಿತಾಂಶವನ್ನೂ ಪ್ರಕಟಿಸಿದ್ದು ಆಕ್ಷೇಪಣೆಗಳು ಇದ್ದಲ್ಲಿ ಜನವರಿ 7ರೊಳಗೆ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಈ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲಾಗಿತ್ತು. ಇದಲ್ಲದೆ, ವಿವಿಧ ಹುದ್ದೆಗಳ ನೇಮಕಾತಿ ಸಂಬಂಧದ ಕನ್ನಡ ಕಡ್ಡಾಯ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನೂ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
BREAKING: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ರಾಜ್ಯ ಸರ್ಕಾರದಿಂದ ‘ಬಳ್ಳಾರಿ ಶೂಟೌಟ್’ ಮುಚ್ಚಿ ಹಾಕಲು ಷಡ್ಯಂತ್ರ್ಯ: HDK ಗಂಭೀರ ಆರೋಪ








