ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚಾಕುವಿನಿಂದ ಇರಿದು ಗಾಯಗೊಳಿಸಿರುವಂತ ಘಟನೆ ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.
ಬೆಳಗಾವಿ ನಗರದ ಕ್ಲಬ್ ರಸ್ತೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಕಾರು ಚಾಲಕ ಬೆಳಗುಂದಿಯ ಬಸವಂತ ಕಡೋಲ್ಕರ್ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಸಚಿವೆ ಹಬ್ಬಾಳ್ಕರ್ ಪುತ್ರ ಮೃಣಾಲ್ ಕಾರು ಚಾಲಕ ಬಸವಂತ ಆಗಿದ್ದಾರೆ.
ಬೈಕ್ ಮೇಲೆ ಬಂದಂತ ಇಬ್ಬರು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಕಾರು ನಿಲ್ಲಿಸಿ ಕೆಳಗೆ ನಿಂತಿದ್ದ ಚಾಲಕ ಬಸವಂತನ ಮೇಲೆ ಚಾಕುವಿನಿಂದ ದಾಳಿ ಮಾಡಲಾಗಿದೆ. ಎದೆ, ಭುಜ ಸೇರಿದಂತೆ ನಾಲ್ಕು ಕಡೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.








