ಹಾವೇರಿ : ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಸರ್ಕಾರದಿಂದ ₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ಆದರೂ ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ ₹52 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಜನರಲ್ಲಿ ತಪ್ಪು ಕಲ್ಪನೆ ಬಿಂಬಿಸುವ ಕೆಲಸ ಆಗಬಾರದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಆಗಿದೆ. ಸರ್ಕಾರದಿಂದ ₹1.12 ಲಕ್ಷ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದ್ದೇವೆ. ಆದರೂ ನಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಮ್ಮ ಸರ್ಕಾರ ಯಾವುದೆ ತಾರತಮ್ಯ ಇಲ್ಲದೇ ಎಲ್ಲರನ್ನೂ ಸಮಾನವಾಗಿ ಕಾಣುತ್ತದೆ. ಹಾಗಾಗಿ, ಎಲ್ಲ ಧರ್ಮ, ಜಾತಿಯ ಬಡವರಿಗೆ ಗ್ಯಾರಂಟಿ ಜಾರಿಗೊಳಿಸಿದ್ದೇವೆ. ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಲಭ್ಯ ಸಿಗಬೇಕು. ಆಗ ಮಾತ್ರ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದರು.








