ಕೋಲಾರ : ಕೋಲಾರದಲ್ಲಿ ಭೀಕರ ಅಪಘಾತ ಸಂಭಾವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಪ್ಪಲ್ಲಿ ಎಂಬಲ್ಲಿ ಒಂದು ಅಪಘಾತ ಸಂಭವಿಸಿದೆ
ಕಾರಿನಲ್ಲಿದ್ದ ಓರ್ವ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು ನಾಲ್ವರಿಗೆ ಗಂಭೀರವಾದ ಗಾಯಗಳಾಗಿವೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಿವಾಸಿ ಕುಶಾಲ್ (25) ಎನ್ನುವ ಯುವಕ ಸಾವನ್ನಪ್ಪಿದ್ದಾನೆ. ನಂಬಿರುವಾಗಿ ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಗೌಣಿಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








