Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಈವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ 12 ಸಾವಿರ ಕೋಟಿ ರೂ. ವೆಚ್ಚ : CM ಸಿದ್ದರಾಮಯ್ಯ ಮಾಹಿತಿ
KARNATAKA

BIG NEWS : ರಾಜ್ಯದಲ್ಲಿ ಈವರೆಗೆ ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷ 12 ಸಾವಿರ ಕೋಟಿ ರೂ. ವೆಚ್ಚ : CM ಸಿದ್ದರಾಮಯ್ಯ ಮಾಹಿತಿ

By kannadanewsnow5708/01/2026 12:51 PM

ಹಾವೇರಿ : ಒಂದು ಲಕ್ಷದ 12 ಸಾವಿರ ಕೋಟಿ ರೂಪಾಯಿಗಳನ್ನು ಎರಡೂವರೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದ್ದರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಪ್ರತಿ ವರ್ಷ ₹52,000 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಲೋಕಾರ್ಪಣೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ  ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು.

ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಘೋಷಿಸಿದ್ದೆ.

ಕರ್ನಾಟಕದಲ್ಲಿ ಇಂದು ಸುಮಾರು 71 ವೈದ್ಯಕೀಯ ಕಾಲೇಜುಗಳಿದ್ದು, ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ವಿಜಯಪುರ ಜಿಲ್ಲೆ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿಯೂ ಹಂತ ಹಂತವಾಗಿ ವೈದ್ಯಕೀಯ ಕಾಲೇಜುಗಳು, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು.

ನಮ್ಮ ಸಮಾಜದಲ್ಲಿ ಬಡವರೇ ಹೆಚ್ಚಾಗಿದ್ದು, ಬಡವರೆಲ್ಲರೂ ಸರ್ಕಾರಿ ಆಸ್ಪತ್ರೆಗಳ ಮೇಲೆ ಅವಲಂಬಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಬಹಳ ದುಬಾರಿ. ದುಬಾರಿ ಚಿಕಿತ್ಸೆಯನ್ನು ಸಾಮಾನ್ಯ ಜನರು ಭರಿಸುವುದು ಕಷ್ಟ. ಸ್ಥಳೀಯವಾಗಿ ಆರೋಗ್ಯ ಸೇವೆ ನೀಡಬೇಕಾದರೆ ಪ್ರತಿ ಜಿಲ್ಲೆಯಲ್ಲಿ ಒಂದು ವೈದ್ಯಕೀಯ ಕಾಲೇಜು ಆಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಕ್ಯಾನ್ಸರ್ ಆಸ್ಪತ್ರೆ, ಟ್ರಾಮಾ ಸೆಂಟರ್ ಇರಲೇಬೇಕು.

ನಮ್ಮದು ಎಲ್ಲರನ್ನೂ ಒಳಗೊಂಡಿರುವ ಸರ್ಕಾರ. ಯಾವುದೇ ಧರ್ಮ, ಜಾತಿ, ಪಕ್ಷಕ್ಕೆ ಸೇರಿದವರಾಗಿದ್ದರು ಅವರನ್ನು ಭೇದ ಭಾವವಿಲ್ಲದೆ, ಸೀಮಾತೀತವಾಗಿ ಕಾಣುತ್ತೇವೆ. ಎಲ್ಲ ಜಾತಿ, ಧರ್ಮ, ಪಕ್ಷಗಳಿಗೆ ಸೇರಿದ ಬಡವರಿಗೆ ನಮ್ಮ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ.

ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆಗಳು ಕೇಳಿ ಬಂದಾಗ  ನಾವು ಯೋಜನೆಯನ್ನು ನಿಲ್ಲಿಸಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾಗಿದೆ, ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಮೊದಲನೇ ವರ್ಷದಲ್ಲಿಯೇ ಜಾರಿ ಮಾಡಲಾಗಿದೆ. ಒಂದು ಲಕ್ಷದ 12 ಸಾವಿರ ಕೋಟಿ ರೂಪಾಯಿಗಳನ್ನು ಎರಡೂವರೆ ವರ್ಷದಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ವೆಚ್ಚ ಮಾಡಿದ್ದರೂ ರಾಜ್ಯ ಆರ್ಥಿಕವಾಗಿ ದಿವಾಳಿಯಾಗಿಲ್ಲ. ಪ್ರತಿ ವರ್ಷ ₹52,000 ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ವೆಚ್ಚ ಮಾಡಲಾಗುತ್ತಿದೆ.

ಹಾವೇರಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಕಟ್ಟಡ, ಪ್ರವಾಸಿ ಮಂದಿರ, ವಾಲ್ಮೀಕಿ ಭವನ, ನೂತನ ಗ್ರಂಥಾಲಯ, ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯನ್ನು 250 ರಿಂದ 500 ಹಾಸಿಗೆಗಳ ಆಸ್ಪತ್ರೆಗೆ ಮೇಲ್ದರ್ಜೆಗೆ ಏರಿಸಲಾಗಿದೆ. ಹಾವೇರಿ ವೈದ್ಯಕೀಯ ಕಾಲೇಜಿಗೆ ಸುಮಾರು ₹500 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಕೇಂದ್ರ ಸರ್ಕಾರ ₹194 ಕೋಟಿ ನೀಡಿದ್ದು, 300ಕ್ಕೂ ಹೆಚ್ಚು ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಭರಿಸಿದೆ.

ನೀರಾವರಿ ಯೋಜನೆಗಳಿಗೆ ವೇಗ ನೀಡಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿಯೇ ಸಮಿತಿ ರಚಿಸೋಣ. ಮಹದಾಯಿ ಯೋಜನೆ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಜಾರಿಯಾಗಲೇಬೇಕು. ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದ್ದರೂ ಅಫಿಡವಿಟ್ ಸಲ್ಲಿಸಿ ವಾಪಸ್ಸು ತೆಗೆದುಕೊಳ್ಳಬೇಕು. ಕಾನೂನು ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯೋಣ. ಕೃಷ್ಣ ಮೇಲ್ದಂಡೆ ಯೋಜನೆ ಪೂರ್ಣಗೊಳ್ಳಲೇಬೇಕು ಇಲ್ಲದಿದ್ದರೆ ರಾಜ್ಯಕ್ಕೆ ಹಂಚಿಕೆಯಾಗಿರುವ 173 ಟಿಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ.

ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಆಸಕ್ತಿ ವಹಿಸಿ ಪರಿಸರ ತೀರುವಳಿ ದೊರಕಿಸಲು ಪ್ರಯತ್ನಿಸಬೇಕು. ಹಾವೇರಿ ಜಿಲ್ಲೆ ಸರ್ವಜ್ಞ, ಕನಕದಾಸರು ಹಾಗೂ ಶಿಶುನಾಳ ಶರೀಫರ ನಾಡು. ಇವರೆಲ್ಲರೂ ಸಮಾಜದಲ್ಲಿ ಸುಧಾರಣೆಯಾಗಿ ಮನುಷ್ಯ ಸಮಾಜ ನಿರ್ಮಾಣವಾಗಬೇಕೆಂದು ಸಾರಿದವರು. ಮನುಷ್ಯರು ಪರಸ್ಪರ ಪ್ರೀತಿಸಬೇಕೆಂದು ಹೇಳುತ್ತದೆಯೇ ಹೊರತು ದ್ವೇಷಿಸಲು ಯಾವ ಧರ್ಮಗಳು ಹೇಳುವುದಿಲ್ಲ. ಇದರಲ್ಲಿ ನಂಬಿಕೆ ಇಟ್ಟವರು ನಾವು. ಹಾವೇರಿ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿಸಲು ಸರ್ಕಾರ ಎಲ್ಲಾ ಪ್ರಯತ್ನ ಮಾಡಲಿದೆ ಎಂದು ಹೇಳಿದ್ದಾರೆ.

ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸಲಾಗುವುದು.
ಕಳೆದ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯನ್ನು ಘೋಷಿಸಿದ್ದೆ. ಉಪಮುಖ್ಯಮಂತ್ರಿಯಾಗಿದ್ದಾಗ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ… pic.twitter.com/PP9O7iLq1U

— Siddaramaiah (@siddaramaiah) January 7, 2026

BIG NEWS: Rs 1 lakh 12 thousand crores spent on guarantee schemes in the state so far: CM Siddaramaiah information
Share. Facebook Twitter LinkedIn WhatsApp Email

Related Posts

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM2 Mins Read

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM2 Mins Read

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM2 Mins Read
Recent News

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

15/03/2026 8:15 AM

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM

‘ಇರಾನ್ ಅನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದೇವೆ’: ತೈಲ ಪಡೆಯುವ ದೇಶಗಳೇ ಹಾರ್ಮುಜ್ ಜಲಸಂಧಿಯನ್ನು ರಕ್ಷಿಸಲಿ ಎಂದ ಟ್ರಂಪ್!

15/03/2026 7:59 AM
State News
KARNATAKA

ALERT : ‘ಚಿಕನ್’ ಪ್ರಿಯರೇ ಎಚ್ಚರ : ಬ್ರಾಯ್ಲರ್ ಕೋಳಿ ಮಾಂಸದ ಈ ಭಾಗ ಆರೋಗ್ಯಕ್ಕೆ ಡೇಂಜರ್ !

By kannadanewsnow5715/03/2026 8:15 AM KARNATAKA 2 Mins Read

ಇಂದಿನ ದಿನಗಳಲ್ಲಿ ಮಾಂಸಾಹಾರಿಗಳ ಸಂಖ್ಯೆ ಹೆಚ್ಚುತ್ತಿದೆ, ಅದರಲ್ಲೂ ಕಡಿಮೆ ಬೆಲೆಗೆ ಮತ್ತು ಸುಲಭವಾಗಿ ಲಭ್ಯವಿರುವ ಬ್ರಾಯ್ಲರ್ ಚಿಕನ್ ಅತಿ ಹೆಚ್ಚು…

ಗೃಹಿಣಿಯರ ಗಮನಕ್ಕೆ: ಈ ‘ಸಿಂಪಲ್ ಟ್ರಿಕ್ಸ್’ ಬಳಸಿದರೆ 2 ದಿನವಾದರೂ ಹಾಲು ಕೆಡುವುದಿಲ್ಲ!

15/03/2026 8:02 AM

ರೈತರೇ ಗಮನಿಸಿ : ಜಮೀನಿನ `ಪೋಡಿ’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 8:00 AM

BIG NEWS : `GBA’ ವ್ಯಾಪ್ತಿಯ ಮತದಾರರ ಪಟ್ಟಿ ಪ್ರಕಟ : ನಿಮ್ಮ ಹೆಸರಿದೆಯೇ ಎಂದು ಜಸ್ಟ್ ಇಲ್ಲಿ ಸ್ಕ್ಯಾನ್ ಮಾಡಿ !

15/03/2026 7:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.