ಬೆಂಗಳೂರು: ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡಲು ಇಂದಿನ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳಿಗೂ ಎ-ಖಾತಾ ಭಾಗ್ಯವನ್ನು ಸರ್ಕಾರ ವಿಸ್ತರಿಸಿದೆ. ಈ ಮೂಲಕ ರಾಜ್ಯದ ಎಲ್ಲಾ ಬಿ-ಖಾತಾ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು ರಾಜ್ಯದ ಎಲ್ಲಾ ಬಿ-ಖಾತಾಗಳಿಗೂ ಎ-ಖಾತಾ ನೀಡೋದಕ್ಕೆ ಇಂದಿನ ಸಂಪುಟ ಸಭೆಯಲ್ಲ ನಿರ್ಧರಿಸಲಾಗಿದೆ ಎಂದರು.
ರಾಜ್ಯದ ಬಿ-ಖಾತಾ ನಿವೇಶನ, ಕಟ್ಟಡ, ಫ್ಲ್ಯಾಟ್ ಗಳಿಗೆ ಎ-ಖಾತಾ ನೀಡಲು ನಿರ್ಧರಿಸಲಾಗಿದೆ. ರಾಜ್ಯಾಧ್ಯಂತ 10 ಲಕ್ಷ ಕಟ್ಟಡಗಳಿಗೆ ಇದರಿಂದ ಲಾಭವಾಗಲಿದೆ. ಬೆಂಗಳೂರು ಬಳಿಕ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗೂ ಇದನ್ನು ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.








