ಶಿವಮೊಗ್ಗ: ಸಾಗರ ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಜನವರಿ.9ರ ನಾಳೆ ಬೆಳಗ್ಗೆ 10 ಗಂಟೆಯಿಂದ ಸಂಜೆ 6ರವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಕುರಿತಂತೆ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 09.01.2026 ಶುಕ್ರವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಹಮ್ಮಿಕೊಂಡಿರುವುದರಿಂದ ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ನೆಹರೂ ನಗರ, ಜೋಸೆಫ್ ನಗರ, ಅರಳೀಕೊಪ್ಪ, ಜನ್ನತ್‌ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿ.ಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಘಂಟೆಯಿಂದ ಸಂಜೆ: 06:00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಕೋರಿದೆ.
ವರದಿ; ವಸಂತ ಬಿ ಈಶ್ವರಗೆರೆ… ಸಂಪಾದಕರು..
BREAKING: ರಾಜ್ಯದ ಎಲ್ಲಾ ‘ಬಿ-ಖಾತಾ’ಗಳಿಗೂ ‘ಎ-ಖಾತಾ’ ಭಾಗ್ಯ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ








