ಬೆಂಗಳೂರು; ರಾಜ್ಯದಲ್ಲಿ ಮಹಿಳಾ ಸುರಕ್ಷತೆಗೆ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದೆ. ಇಂದಿನ ಸಂಪುಟ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ಅಕ್ಕ ಪಡೆ ಸ್ಥಾಪನೆಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ ಪಡೆಯನ್ನು ರಾಜ್ಯದ 30 ಜಿಲ್ಲೆ ಮತ್ತು 5 ಪೊಲೀಸ್ ಆಯುಕ್ತಾಲಯಗಳಲ್ಲಿ ಸ್ಥಾಪಿಸಿ, ಮಹಿಳೆಯರು ಮತ್ತು ಮಕ್ಕಳಿಗೆ ಕಾನೂನಿನ ಅರಿವು, ತಕ್ಷಣದ ರಕ್ಷಣೆ ಮತ್ತು ಅಗತ್ಯ ನೆರವು ನೀಡಲು ಉದ್ದೇಶಿಸಲಾಗಿದೆ.
ದೌರ್ಜನ್ಯ, ನಿರ್ಲಕ್ಷ್ಯ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣವನ್ನು ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಕ್ಕ ಪಡೆಯನ್ನು ರಾಜ್ಯದ 30 ಜಿಲ್ಲೆ ಮತ್ತು 5 ಪೊಲೀಸ್… pic.twitter.com/TPEdyFW5pP
— DIPR Karnataka (@KarnatakaVarthe) January 8, 2026
BREAKING : ಪಕ್ಕದ ಮನೆಯವರ ಮೇಲೆ ವರದಕ್ಷಿಣೆ ಕಿರುಕುಳ ಕೇಸ್ ದಾಖಲಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು








