ಬೆಂಗಳೂರು : ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂಥ ಪ್ರಕರಣಗಳನ್ನು ತಡೆಯಲು ರಾಜ್ಯದ ಎಲ್ಲ 31 ಜಿಲ್ಲೆಗಳು, ಐದು ಪೊಲೀಸ್ ಆಯುಕ್ತಾಲಯಗಳಲ್ಲಿ ‘ಅಕ್ಕ ಪಡೆ’ ಯೋಜನೆಯನ್ನು ಒಳಾಡಳಿತ ಇಲಾಖೆ ಸಹಯೋಗದೊಂದಿಗೆ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ನೀನೆ ಸಂಪುಟ ಸಭೆಯ ಬಳಿಕ ಸಚಿವ ಎಚ್.ಕೆ.ಪಾಟೀಲ್ ಮಾತನಾಡಿ, ಬಾಲ್ಯವಿವಾಹ ಪ್ರಕರಣಗಳ ತಡೆ, ಅಪ್ರಾಪ್ತ ಹೆಣ್ಣು ಮಕ್ಕಳು, ಮಹಿಳೆಯರ ಮೇಲಿನ ದೌರ್ಜನ್ಯದಂತಹ ಪ್ರಕರಣಗಳನ್ನು ತಡೆದು ರಕ್ಷಣೆ ನೀಡುವ ದೃಷ್ಟಿಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ‘ಅಕ್ಕ ಪಡೆ’ ರಚಿಸಿ ಕಾರ್ಯನಿರ್ವಹಿಸಲಾಗಿತ್ತು. ಇದು ಉದ್ದೇಶಿತ ಕಾರ್ಯಗಳಲ್ಲಿ ಯಶಸ್ವಿಯಾಗಿರುವುದರಿಂದ ರಾಜ್ಯಾದ್ಯಂತ ಅಕ್ಕ ಪಡೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.








