ಬೆಂಗಳೂರು: ನಗರದ ಮಹದೇವಪುರ ಪ್ರದೇಶದಲ್ಲಿ ನಡೆದ ಅಪಘಾತದಲ್ಲಿ, ಕ್ವಿಕ್-ಕಾಮರ್ಸ್ ಪ್ಲಾಟ್‌ಫಾರ್ಮ್ ಜೆಪ್ಟೊದಲ್ಲಿ ಕೆಲಸ ಮಾಡುತ್ತಿರುವ ಡೆಲಿವರಿ ಎಕ್ಸಿಕ್ಯೂಟಿವ್ ಮೇಲೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವಂತ ಆಘಾತಕಾರಿ ಘಟನೆ ನಡೆದಿದೆ. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವಂತ ವೀಡಿಯೊದಲ್ಲಿ, ಹೆಲ್ಮೆಟ್ ಧರಿಸಿದ್ದ ಡೆಲಿವರಿ ಬಾಯ್ ಮೇಲೆ ಇಬ್ಬರು ವ್ಯಕ್ತಿಗಳು ಹಿಂಸಾತ್ಮಕವಾಗಿ ಹಲ್ಲೆ ನಡೆಸಿರೋದನ್ನು ಕಾಣಬಹುದಾಗಿದೆ.
Road Rage Gone Mad in Mahadevpura: Two Scooty Riders Assault Zepto Delivery Boy
A shocking incident of road rage was reported in the Mahadevpura area, where a Zepto delivery rider was brutally assaulted by two scooty riders following a minor collision between their two-wheelers.… pic.twitter.com/FehJfaSSe2
— Karnataka Portfolio (@karnatakaportf) January 8, 2026
ರಸ್ತೆಯ ಒಂದು ಬದಿಯಿಂದ ಮುಖ್ಯ ರಸ್ತೆಗೆ ಡೆಲಿವರಿ ಬಾಯ್ ಬಂದಾಗ, ದಿಢೀರ್ ಬಂದಂತ ಮತ್ತೊಂದು ಬೈಕ್ ಡಿಕ್ಕಿಯಾಗಿದೆ. ಈ ವೇಳೆ ಡೆಲಿವರಿ ಬಾಯ್ ಅಚಾನಕ್ಕೆ ನಡೆದಂತ ಘಟನೆಯಿಂದಾಗಿ ಕ್ಷಮೆಯಾಚಿಸಿದ್ದಾನೆ. ಆದರೇ ಬೈಕ್ ನಲ್ಲಿದ್ದಂತ ಇಬ್ಬರು ವ್ಯಕ್ತಿಗಳು ಮಾತ್ರ ಡೆಲಿವರಿ ಬಾಯ್ ನನ್ನು ತಮ್ಮ ಹೆಲ್ಮೆಟ್ ನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.
ಇದಷ್ಟೇ ಅಲ್ಲದೇ ಡೆಲವರಿ ಬಾಯ್ ಬೈಕ್ ನಿಂದ ಕೆಳಗೆ ಬಿದ್ದರೂ ಬಿಡದಂತ ಇಬ್ಬರು ದುಷ್ಕರ್ಮಿಗಳು ಕಾಲಿನಿಂದಲೂ ಹಲ್ಲೆ ಮಾಡಿದ್ದಾರೆ. ಈ ಎಲ್ಲವೂ ಸಮೀಪದಲ್ಲಿದ್ದಂತ ಸಿಸಿಟಿವಿಯೊಂದರಲ್ಲಿ ದಾಖಲಾಗಿದೆ. ಡೆಲಿವರಿ ಬಾಯ್ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ಮಾಡಿದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ, ಪೊಲೀಸರು ಹಲ್ಲೆ ಮಾಡಿದವರ ವಿರುದ್ಧ ಮಹದೇವಪುರ ಠಾಣೆಯ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.








