ಬೆಂಗಳೂರು : ಬೆಂಗಳೂರಿನ ಹೆಬ್ಬಾಳದ ಕೇಂದ್ರೀಯ ವಿದ್ಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ. ಮೂರು ಆರ್‌ಡಿಎಕ್ಸ್ ಬಾಂಬ್ ಇಟ್ಟಿರುವುದು ವಿದ್ಯಾಲಯದ ಇಮೇಲ್ ಐಡಿ ಗೆ ಸಂದೇಶ ಬಂದಿದೆ. ಸದಾಶಿವನಗರ ಠಾಣೆಗೆ ಕಾಲೇಜಿನ ಪ್ರಿನ್ಸಿಪಲ್ ಪಿಎಮ್ ಪ್ರಕಾಶ್ ದೂರ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿ ಸದಾಶಿವನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪರಿಶೀಲನೆ ವೇಳೆ ಯಾವುದೇ ಆರ್ ಡಿ ಎಕ್ಸ್ ಬಾಂಬ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಇದೊಂದು ಹೊಸ ಬೆದರಿಕೆ ಅನ್ನೋದು ಮೇಲ್ನೋಟಕ್ಕೆ ಪತ್ತೆಯಾಗಿದೆ ಬೆಂಗಳೂರಿನ ಸದಾಶಿವನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








