Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

15/03/2026 11:59 AM

ದೆಹಲಿಯಲ್ಲಿ ಸ್ವಚ್ಛತಾ ಅಭಿಯಾನದ ವೇಳೆ, ಕಸದ ರಾಶಿಯಲ್ಲಿ ಮಾನವನ ಅಸ್ತಿಪಂಜರ ಪತ್ತೆ : ಬೆಚ್ಚಿ ಬಿದ್ದ ಜನತೆ!

15/03/2026 11:49 AM

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ನಡುಗಿದ ಟೆಲ್ ಅವಿವ್, ಮುಗಿಲು ಮುಟ್ಟಿದ ಸೈರನ್ ಅಬ್ಬರ!

15/03/2026 11:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹಗಲಿನಲ್ಲಿ `ಕೃಷಿ ಪಂಪ್ ಸೆಟ್’ ಗೆ 7 ಗಂಟೆ ವಿದ್ಯುತ್ ಪೂರೈಕೆ
KARNATAKA

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಹಗಲಿನಲ್ಲಿ `ಕೃಷಿ ಪಂಪ್ ಸೆಟ್’ ಗೆ 7 ಗಂಟೆ ವಿದ್ಯುತ್ ಪೂರೈಕೆ

By kannadanewsnow5710/01/2026 5:53 AM

ಬೆಂಗಳೂರು : ಮುಂಬರುವ ಬೇಸಿಗೆಯಲ್ಲಿ ಬೇಡಿಕೆಗೆ ಅನುಸಾರವಾಗಿ ಸಮರ್ಪಕ ವಿದ್ಯುತ್ ಸರಬರಾಜಿಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ಯಾವುದೇ ಕಾರಣಕ್ಕೂ ಲೋಡ್ ಶೆಡ್ಡಿಂಗ್‌ಗೆ ಅವಕಾಶವಾಗದಂತೆ ನೋಡಿಕೊಳ್ಳಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಇಂಧನ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೇಸಿಗೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂನ ಬೆಳಕು ಭವನದಲ್ಲಿ ಶುಕ್ರವಾರ ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಇಲಾಖೆ ಕೈಗೊಂಡಿರುವ ಪೂರ್ವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರಲ್ಲದೆ, “ಬೇಡಿಕೆ ಮತ್ತು ಪೂರೈಕೆಯಲ್ಲಿ ಸಮನ್ವಯತೆ ಸಾಧಿಸಲು ಅಗತ್ಯವಿರುವ ವಿದ್ಯುತ್ ಉತ್ಪಾದನೆ ಮತ್ತು ಖರೀದಿಗೆ ಕ್ರಮ ಕೈಗೊಳ್ಳಬೇಕು,” ಎಂದು ತಿಳಿಸಿದರು.

“ಬೇಸಿಗೆಯಲ್ಲಿ ಅದರಲ್ಲೂ ಮುಖ್ಯವಾಗಿ ಮಾರ್ಚ್‌ನಿಂದ ಮೇ ಅಂತ್ಯದವರೆಗೆ ಮೂರು ತಿಂಗಳಲ್ಲಿ ವಿದ್ಯುತ್ ಬೇಡಿಕೆ ಎಷ್ಟಾಗಬಹುದು ಎಂಬುದನ್ನು ಈಗಲೇ ಲೆಕ್ಕಾಚಾರ ಮಾಡಿ ಅದಕ್ಕೆ ತಕ್ಕಂತೆ ಪೂರೈಸಲು ವಿದ್ಯುತ್ ಬ್ಯಾಂಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು. ಹಗಲು ವೇಳೆ ಸೌರ ವಿದ್ಯುತ್ ಹೇರಳವಾಗಿ ಲಭ್ಯವಿರುವುದರಿಂದ ಅದನ್ನು ಬಳಸಿಕೊಂಡು ರಾತ್ರಿ ವೇಳೆ ಜಲ ಮತ್ತು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಮೂಲಕ ಪೂರೈಕೆ ಉತ್ಪಾದನೆಯಲ್ಲಿ ಸಮತೋಲನ ಕಾಯ್ದುಕೊಳ್ಳಬೇಕು,” ಎಂದು ಹೇಳಿದರು.

“ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಸಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ವಿನಿಮಯ ಅಥವಾ ದೀರ್ಘಾವಧಿ ಖರೀದಿ ಆಧಾರದ ಮೇಲೆ ಅನ್ಯ ರಾಜ್ಯಗಳಿಂದ ವಿದ್ಯುತ್ ಪಡೆಯಲು ಹಾಗೂ ಸಕ್ಕರೆ ಜತೆಗೆ ವಿದ್ಯುತ್ ಉತ್ಪಾದನೆ ಮಾಡುವ ಕಾರ್ಖಾನೆಗಳೊಂದಿಗೆ ಈಗಲೇ ಒಪ್ಪಂದ ಮಾಡಿಕೊಳ್ಳಬೇಕು. ಇದರಿಂದ ಬೇಸಿಗೆಯಲ್ಲಿ ಹೆಚ್ಚುವರಿ ವಿದ್ಯುತ್ ಲಭ್ಯವಾದರೆ ಬೇರೆ ರಾಜ್ಯಗಳಿಗೆ ಮಾರಾಟ ಮಾಡಬಹುದು. ಆದರೆ, ಯಾವುದೇ ಕಾರಣಕ್ಕೂ ಕೊರತೆ ಉಂಟಾಗಬಾರದು,” ಎಂದರು.

ಕೃಷಿಗೆ ಹಗಲು 7 ಗಂಟೆ ವಿದ್ಯುತ್:

“ರಾಜ್ಯದ ಹಲವು ಭಾಗಗಳಲ್ಲಿ ಈಗಾಗಲೇ ಕುಸುಮ್- ಸಿ ಯೋಜನೆಯಡಿ ಫೀಡ್ ಸೋಲರೈಸೇಷನ್ ಮೂಲಕ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು 7 ಗಂಟೆ ನಿರಂತರ ವಿದ್ಯುತ್ ಪೂರೈಸಲಾಗುತ್ತಿದೆ. ಪ್ರಸ್ತುತ ಸೌರ ವಿದ್ಯುತ್ ಉತ್ಪಾದನೆ ಹೆಚ್ಚಾಗಿರುವುದರಿಂದ ಇತರೆ ಭಾಗಗಳಲ್ಲೂ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು,” ಎಂದು ಸಚಿವರು ನಿರ್ದೇಶನ ನೀಡಿದರು.

ಪಿಸಿಕೆಎಲ್ ಅಧಿಕಾರಿಗಳು ಮಾಹಿತಿ ನೀಡಿ, “ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಸೆಂಬರ್ ತಿಂಗಳಲ್ಲಿ ದಾಖಲೆಯ 17,220 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಬಂದಿದ್ದು,ಸಮರ್ಪಕವಾಗಿ ಪೂರೈಕೆ ಮಾಡಲಾಗಿದೆ. ಈ ಬಾರಿಯ ಬೇಸಿಗೆಯಲ್ಲಿ ಕಳೆದ ವರ್ಷಕ್ಕಿಂತ ಶೇ. 5ರಷ್ಟು ಹೆಚ್ಚುವರಿ ವಿದ್ಯುತ್ ಬೇಡಿಕೆ ನಿರೀಕ್ಷಿಸಲಾಗಿದ್ದು, ಅದಕ್ಕೆ ತಕ್ಕಂತೆ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಬೇಡಿಕೆ ಅವಧಿಯಲ್ಲಿ ಅಂದರೆ ಬೆಳಗ್ಗೆ ಮತ್ತು ಸಂಜೆ ಜಲ ವಿದ್ಯುತ್ ಮತ್ತು ಉಷ್ಣ ವಿದ್ಯುತ್ ಉತ್ಪಾದಿಸಿ ಪೂರೈಸಲಾಗುವುದು.” ಎಂದು ತಿಳಿಸಿದರು.

“ಪ್ರಸ್ತುತ ರಾಜ್ಯದ ಜಲಾಶಯಗಳಲ್ಲಿ ಸಂಗ್ರಹವಾಗಿರುವ ನೀರಿನಲ್ಲಿ ಜುಲೈ ಅಂತ್ಯದವರೆಗೆ ಪ್ರತಿನಿತ್ಯ 33 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಬಹುದು. ಅದೇ ರೀತಿ ರಾಯಚೂರು, ಯರಮರಸ್ ಮತ್ತು ಬಳ್ಳಾರಿಯ ಉಷ್ಣ ವಿದ್ಯುತ್ ಸ್ಥಾವರಗಳಲ್ಲಿರುವ ಘಟಕಗಳನ್ನೂ ಬೇಸಿಗೆಯಲ್ಲಿ ಅಗತ್ಯ ವಿದ್ಯುತ್ ಉತ್ಪಾದಿಸಲು ಅನುವಾಗುವಂತೆ ಸಿದ್ಧಗೊಳಿಸಲಾಗುತ್ತಿದೆ. ಜತೆಗೆ ನವೀಕರಿಸಬಹುದಾದ ಇಂಧನ ಮೂಲಗಳಿಂದಲೂ ಸಾಕಷ್ಟು ವಿದ್ಯುತ್ ಉತ್ಪಾದಿಸಲಾಗುತ್ತಿದೆ,” ಎಂದು ವಿವರಿಸಿದರು.

ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ. ಶಿವಶಂಕರ ಎನ್., ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ವೈಶಾಲಿ ಎಂ.ಎಲ್., ಕೃಷ್ಣ ಬಾಜಪೇಯಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಆರ್.ಜಯಕುಮಾರ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ ರಾಜು, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಸೇರಿದಂತೆ ಇಂಧನ ಇಲಾಖೆ ಹಿರಿಯ ಅಧಿಕಾರಿಗಳು ಇದ್ದರು.

ಲಭ್ಯ ವಿದ್ಯುತ್ತನ್ನು ಸಮರ್ಪಕ ರೀತಿಯಲ್ಲಿ ಪ್ರಸರಣ ಮತ್ತು ಸರಬರಾಜು ಮಾಡಲು ಅಗತ್ಯ ಮೂಲ ಸೌಕರ್ಯಗಳನ್ನು ಈಗಲೇ ಸಿದ್ಧ ಮಾಡಿಕೊಳ್ಳಬೇಕು. ಓವರ್ ಲೋಡ್ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಪರಿಹಾರ ಕಂಡುಕೊಳ್ಳೇಕು. ಲಿಂಕ್ ವ್ಯವಸ್ಥೆ ಮೂಲಕ ಎಲ್ಲಾ ಭಾಗಗಳಲ್ಲಿ ಸಮರ್ಪಕ ವಿದ್ಯುತ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು. -ಗೌರವ ಗುಪ್ತ, ಅಪರ ಮುಖ್ಯ ಕಾರ್ಯದರ್ಶಿಗಳು, ಇಂಧನ ಇಲಾಖೆ

Good news for the state's farmers: 7-hour power supply to the ``Agricultural Pump Set'' during the day
Share. Facebook Twitter LinkedIn WhatsApp Email

Related Posts

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

15/03/2026 11:59 AM2 Mins Read

ಮೈಶುಗರ್ ಭ್ರಷ್ಟಾಚಾರ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ : ಶಾಸಕ ಗಣಿಗ ರವಿಕುಮಾರ್ ಹೇಳಿಕೆ

15/03/2026 11:41 AM1 Min Read

ALERT : ಹೋಟೆಲ್, ಟೀ ಅಂಗಡಿಯಲ್ಲಿ ‘ಮನೆ ಗ್ಯಾಸ್’ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು !

15/03/2026 11:30 AM1 Min Read
Recent News

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

15/03/2026 11:59 AM

ದೆಹಲಿಯಲ್ಲಿ ಸ್ವಚ್ಛತಾ ಅಭಿಯಾನದ ವೇಳೆ, ಕಸದ ರಾಶಿಯಲ್ಲಿ ಮಾನವನ ಅಸ್ತಿಪಂಜರ ಪತ್ತೆ : ಬೆಚ್ಚಿ ಬಿದ್ದ ಜನತೆ!

15/03/2026 11:49 AM

ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ನಡುಗಿದ ಟೆಲ್ ಅವಿವ್, ಮುಗಿಲು ಮುಟ್ಟಿದ ಸೈರನ್ ಅಬ್ಬರ!

15/03/2026 11:47 AM

ಮೈಶುಗರ್ ಭ್ರಷ್ಟಾಚಾರ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ : ಶಾಸಕ ಗಣಿಗ ರವಿಕುಮಾರ್ ಹೇಳಿಕೆ

15/03/2026 11:41 AM
State News
BUSINESS

ಕೆಲಸ ಸಿಕ್ಕಿಲ್ಲ ಎಂದು ಚಿಂತಿಸಬೇಡಿ : 1 ಲಕ್ಷ ಹೂಡಿಕೆ ಮಾಡಿ ಪ್ರತಿ ತಿಂಗಳು4 ಲಕ್ಷ ರೂ.ವರೆಗೆ ಆದಾಯ ಗಳಿಸಿ

By kannadanewsnow5715/03/2026 11:59 AM BUSINESS 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಸ್ವಂತ ಉದ್ಯೋಗ ಮಾಡುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ನಗರ ಪ್ರದೇಶಗಳಲ್ಲಿ ವಾಸಿಸುವವರಿಗೆ ವ್ಯವಹಾರ ಆರಂಭಿಸಲು…

ಮೈಶುಗರ್ ಭ್ರಷ್ಟಾಚಾರ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತೆ : ಶಾಸಕ ಗಣಿಗ ರವಿಕುಮಾರ್ ಹೇಳಿಕೆ

15/03/2026 11:41 AM

ALERT : ಹೋಟೆಲ್, ಟೀ ಅಂಗಡಿಯಲ್ಲಿ ‘ಮನೆ ಗ್ಯಾಸ್’ ಬಳಸುವವರೇ ಎಚ್ಚರ : ರಾಜ್ಯಾದ್ಯಂತ `ಅಗತ್ಯ ವಸ್ತುಗಳ ಕಾಯ್ದೆ ಅಡಿ’ 316 ಕೇಸ್ ದಾಖಲು !

15/03/2026 11:30 AM

(ಜೇಷ್ಠಾ ಲಕ್ಷ್ಮಿ) ದರಿದ್ರ ಲಕ್ಷ್ಮೀ ಹೋಗಿ ಸೌಭಾಗ್ಯ ಲಕ್ಷ್ಮಿ ಮನೆಯಲ್ಲಿ ನೆಲೆಸುವ ಸೂತ್ರ..!!

15/03/2026 11:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.