ಬೆಂಗಳೂರು : ಬೆಂಗಳೂರಿನಲ್ಲಿ ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಯುವತಿಯನ್ನು ಕೊಲೆ ಮಾಡಲು ಯುವಕ ಸ್ಕೆಚ್ ಹಾಕಿರುವ ಘಟನೆ ವರದಿಯಾಗಿದೆ. ಯುವತಿಯನ್ನು ಕೊಲ್ಲಲು ಹಾಡು ಹಗಲೇ ಯುವಕ ಗನ್ ಹಿಡಿದು ಓಡಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಹೌದು ಯುವತಿಯನ್ನು ಕೊಲ್ಲಲು ಆನ್ಲೈನ್ ಮುಖಾಂತರ ಯುವಕ ಏನ್ ಖರೀದಿ ಮಾಡಿದ್ದ ಎನ್ನಲಾಗಿದೆ. ಆದರೆ ಯುವತಿಯ ಸಮಯಪ್ರಜ್ಞೆಯಿಂದ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಈ ವೇಳೆ ತಕ್ಷಣ ಪೊಲೀಸರು ಗನ್ ಸಮೇತ ಬಿಹಾರ್ ಮೂಲದ ಯುಗಗಳನ್ನು ವಶಕ್ಕೆ ಪಡೆದಿದ್ದಾರೆ. ಯುವಕ ಗನ್ ಹಿಡಿದು ಓಡಾಡುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








