ಹಾವೇರಿ : ಹಾವೇರಿಯಲ್ಲಿ ಗೃಹಿಣಿ ಒಬ್ಬರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪತಿಯ ಮನೆಯಲ್ಲಿ ಮಹಿಳೆ ನೇಣು ಬಿಗಿದಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಸುನಿತಾ ದೊಡ್ಡಮನಿ (35) ಎನ್ನುವವರ ಶವ ಪತ್ತೆಯಾಗಿದೆ.
ಪತಿಯೇ ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಮದುವೆಯಾಗಿ ಕೇವಲ 9 ತಿಂಗಳು ಮಾತ್ರ ಆಗಿತ್ತು ಅಲ್ಲದೆ ಮಗಳು ಎರಡು ತಿಂಗಳ ಗರ್ಭಿಣಿ ಆಗಿದ್ದಳು. ಪತಿ ಗಿರೀಶ್ ದೊಡ್ಮನೆ ಕೊಲೆ ಮಾಡಿದ್ದಾನೆ ಎಂದು ಪೋಷಕರ ಆರೋಪಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಸುನಿತಾ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ. ಶಿಗ್ಗಾವಿ ಪೊಲೀಸ್ ಠಾಣೆಯ ಮುಂದೆ ಪೋಷಕರು ಪ್ರತಿಭಟನೆ ಮಾಡುತ್ತಿದ್ದಾರೆ.








