ಬಾಗಲಕೋಟೆ : ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹುಕ್ ಕಟ್ ಆಗಿ ಟ್ರ್ಯಾಕ್ಟರ್ ಪಲ್ಟಿ ಆಗಿದೆ. ಈ ವೇಳೆ ಕಬ್ಬು ಕಟಾವು ಕಾರ್ಮಿಕರ ಇಬ್ಬರು ಮಕ್ಕಳು ಸ್ಥಳದಲ್ಲಿ ಅವನಪ್ಪಿರುವ ಘಟನೆ ಕಮತಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮುರದ ಕಾರ್ಮಿಕರ ಇಬ್ಬರು ಮಕ್ಕಳು ಸಾವನಪ್ಪಿದ್ದು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕಮತಿಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, 8 ವರ್ಷ ಮತ್ತು 10 ವರ್ಷದ ಬಾಲಕರು ಸಾವನ್ನಪ್ಪಿದ್ದಾರೆ.
ಮತ್ತಿಬ್ಬರು ಬಾಲಕಿಯರಿಗೆ ಗಂಭೀರವಾದ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ ಘಟನಾ ಸ್ಥಳಕ್ಕೆ ಅಮೀನಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.








