ಹಿರಿಯೂರು : ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಹಿಂಡಸಕಟ್ಟೆ ಬಳಿ ಲಾರಿ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಕಾರು ಮೈಸೂರು ಕಡೆಯಿಂದ ಹಿರಿಯೂರಿನತ್ತ ಬರುತ್ತಿತ್ತು. ಲಾರಿ ಮೈಸೂರು ಕಡೆಗೆ ತೆರಳುತ್ತಿತ್ತು. ಯುವಕರ ತಂಡ ಹಳ್ಳಿಯೊಂದರಲ್ಲಿ ಊಟ ಮುಗಿಸಿಕೊಂಡು ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ಪಟ್ಟಣದ ಕಡೆಗೆ ಬರುವಾಗ ಘಟನೆ ನಡೆದಿದೆ.
ಹಿರಿಯೂರು ಕೊಟ್ಟಿಗೆ ಮೂಲದ ವಿಶಾಲ್ (24) ಯಶವಂತ (22) ನಂಜುಂಡಿ (22) ರಾಹುಲ್ (19) ಮೃತರು. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








