ದಾವಣಗೆರೆ : ದಾವಣಗೆರೆಯಲ್ಲಿ ಘೋರವದ ದುರಂತ ಒಂದು ಸಂಭವಿಸಿದ್ದು ಕೌಟುಂಬಿಕ ಕಲಹದಿಂದ ಬೇಸತ್ತ ಬಿಜೆಪಿ ಮುಖಂಡರೊಬ್ಬರು ಮನನೊಂದು ಕಾರ್ ನಲ್ಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ನಾಗನೂರ ಎಂಬಲ್ಲಿ ನಡೆದಿದೆ.
ದಾವಣಗೆರೆಯ ಬಿಜೆಪಿ ಮುಖಂಡ ಹಾಗೂ ಪಾಲಿಕೆಯ ಮಾಜಿ ಸದಸ್ಯ ಚಂದ್ರಶೇಖರ್ ಸಂಕೋನ್ ಆತ್ಮಹತ್ಯೆ ಮಾಡಿಕೊಂಡವರು. ತಮ್ಮ ಇಬ್ಬರು ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದು ಇದರಿಂದ ಮನನೊಂದ ಚಂದ್ರಶೇಖರ ಸಂಕೋಲ ಕಾರಿನಲ್ಲಿಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಚಂದ್ರಶೇಖರ್ ಅವರಿಬ್ಬರು ಮಕ್ಕಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.








