ಬೆಂಗಳೂರು : ರಾಜ್ಯ ಬಜೆಟ್ ಮಂಡನೆಗೆ ಇದೀಗ ಸರ್ಕಾರ ಚಿಂತನೆ ನಡೆಸಿದ್ದು, ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್ 6ರಂದು ಬಜೆಟ್ ಮಂಡಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಕಿತ್ತಾಟದ ನಡುವೆಯೂ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿದ್ದಾರೆ. 16 ಬಜೆಟ್‌ಗಳನ್ನ ಈಗಾಗಲೇ ಮಂಡಿಸಿದ್ದು, ಮಾರ್ಚ್ 6ರಂದು ಮಂಡಿಸುವ ಬಜೆಟ್ 17ನೇ ಬಜೆಟ್ ಆಗಲಿದೆ. ಮಾರ್ಚ್ 5 ರಿಂದ ಬಜೆಟ್ ಅಧಿವೇಶನ ಶುರುವಾಗುವ ಸಾಧ್ಯತೆ ಇದೆ. ಅಂದು ವಿಧಾನ ಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್ 6 ರಂದು ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.








