ಬಾಗಲಕೋಟೆ : ನಿನ್ನೆ ತಾನೆ ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳನ್ನು ಸಹ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಆ ಘಟನೆ ಮಾಸುವ ಮುನವೇ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು 40 ವರ್ಷದ ವಿಚ್ಛೇದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಬಾಗಲಕೋಟೆ ಜಿಲ್ಲೆಯ ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದೆ.
ಹೌದು ಅತ್ಯಾಚಾರ ಎಸಗಿ ರಾಷ್ಟ್ರೀಯ ಹೆದ್ದಾರಿ ಬಳಿ ಕಾಮುಕರು ಮಹಿಳೆಯನ್ನು ಬಿಟ್ಟು ಹೋಗಿದ್ದಾರೆ, ಜನವರಿ 5 ರಂದು ನಡೆದಿರುವ ಘಟನೆ ಇದು ಈಗ ತಡವಾಗಿ ಬೆಳಕಿಗೆ ಬಂದಿದೆ. ಆಂಬುಲೆನ್ಸ್ ಗೆ ಕರೆ ಮಾಡಿ ತಕ್ಷಣ ಸ್ಥಳಿಯರು ಮಾಹಿತಿ ನೀಡಿದ್ದಾರೆ. ಸಂತ್ರಸ್ತೆಯನ್ನು ಹುನಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಸಂತ್ರಸ್ತೆಗೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ ಸೋದರಿಯ ಮೇಲಿನ ದೌರ್ಜನ್ಯ ನೆನೆದು ಸಹೋದರ ರವಿ ಕಣ್ಣೀರು ಹಾಕಿದ್ದಾರೆ. ಇದುವರೆಗೂ ಯಾರನ್ನು ಬಂಧಿಸದೇ ಇರುವುದಕ್ಕೆ ರವಿ ಕಣ್ಣೀರು ಹಾಕಿದ್ದಾರೆ ಆರೋಪಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಹುನಗುಂದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿದೆ.








