ಬೆಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ ಶಿಕ್ಷಕರು ಮತ್ತು ವಿದ್ಯಾರ್ಥಿಗಳನ್ನು ಇದೀಗ ಬಂಧಿಸಲಾಗಿದೆ. ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ 8 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ತುಮಕೂರು, ರಾಮನಗರ, ಕಲ್ಬುರ್ಗಿ ಜಿಲ್ಲೆಯ ಶಾಲೆಗಳ ಶಿಕ್ಷಕರು ಹಾಗೂ ಕೆಲವು ವಿದ್ಯಾರ್ಥಿಗಳು ಅರೆಸ್ಟ್ ಆಗಿದ್ದಾರೆ. ಬೆಂಗಳೂರು ಉತ್ತರ ವಿಭಾಗದ ಸೆನ್ ಠಾಣೆಯಲ್ಲಿ ಈ ಒಂದು ಪ್ರಕರಣ ದಾಖಲಾಗಿತ್ತು. ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್ ನಲ್ಲಿ ಹರಿದಾಡಿತ್ತು. ಈ ಸಂಬಂಧ ಇದೀಗ ಪೊಲೀಸರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಿದ್ದಾರೆ.
ಹಿಂದಿ ವಿಷಯದ ಪ್ರಶ್ನೆ ಪತ್ರಿಕೆ ಯೂಟ್ಯೂಬ್ ನಲ್ಲಿ ಹರಿದಾಡಿತ್ತು ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿ ದೂರು ನೀಡಿದ್ದರು ಪೊಲೀಸರ ತನಿಖೆ ವೇಳೆ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವುದು ಬಯಲಾಗಿದೆ. ತುಮಕೂರು ಶಾಲೆಯೊಂದರ ಮುಖ್ಯೋಪಾಧ್ಯಾಯ ವಿಡಿ ಗಿರೀಶ್ ಕಲ್ಬುರ್ಗಿ ಶಿಕ್ಷಕರಾದ ಶಾಹಿದಾ ಬೇಗಂ, ಶಿಕ್ಷಕ ಮೊಹಮ್ಮದ್ ಸಿರಾಜುದ್ದೀನ್ ಫರ್ಜಾನ ಬೇಗಂ ಸಹಶಿಕ್ಷಕಿ ಫಾಹ್ಮಿದ ರಾಮನಗರದ ಶಿಕ್ಷಕ ಅಮ್ಜದ್ ಖಾನ್ ಬಂಧಿಸಿ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.








