ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯದ ನಿಮಿತ್ತ, ನಾಳೆ ಸಾಗರ ಪಟ್ಟಣದ ಹಲವೆಡೆ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಆಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಸಾಗರದ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು, ದಿನಾಂಕ 13-01-2026ರ ನಾಳೆ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಳ ಸ್ಥಳಾಂತರಿಸುವ ಕಾರ್ಯ ನಡೆಸಲಾಗುತ್ತಿದೆ. ಹೀಗಾಗಿ ನಾಳೆ ಸಾಗರ ಪಟ್ಟಣದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗುವುದಾಗಿ ತಿಳಿಸಿದ್ದಾರೆ.
ನಾಳೆ ಸಾಗರ ಪಟ್ಟಣದ ನೆಹರೂ ನಗರ, ಜೋಸೆಫ್ ನಗರ, ಅರಳೀಕೊಪ್ಪ, ಜನ್ನತ್ ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಬಿಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್ಐಸಿ ಆಫೀಸ್ ಹತ್ತಿರ ವ್ಯಾಪ್ತಿಯಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..
BREAKING: ಸಾಗರದಲ್ಲಿ ‘ಪ್ರತಿಷ್ಠಿತ ಪತ್ರಿಕೆ’ ಹೆಸರಲ್ಲಿ ವಸೂಲಿ, ಇಬ್ಬರ ವಿರುದ್ಧ ಪೊಲೀಸರಿಗೆ ‘KUWJ ದೂರು’








