ನವದೆಹಲಿ: ಜರ್ಮನ್ ಫೆಡರಲ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಭಾರತಕ್ಕೆ ಎರಡು ದಿನಗಳ ಅಧಿಕೃತ ಭೇಟಿಯನ್ನು ಪ್ರಾರಂಭಿಸುತ್ತಿದ್ದಂತೆ ಉಭಯ ದೇಶಗಳ ನಡುವಿನ ಆಳವಾದ ಆರ್ಥಿಕ ಸಹಕಾರದ ಮಹತ್ವವನ್ನು ಒತ್ತಿಹೇಳಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಭಾರತ-ಜರ್ಮನಿ ಸಂಬಂಧಗಳಲ್ಲಿ ಹೆಚ್ಚುತ್ತಿರುವ ವೇಗವನ್ನು ಎತ್ತಿ ತೋರಿಸಿದರು.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, “ಚಾನ್ಸೆಲರ್ ಮೆರ್ಜ್ ಮತ್ತು ನಾನು ಭಾರತ ಮತ್ತು ಜರ್ಮನ್ ಸಿಇಒಗಳನ್ನು ಭೇಟಿ ಮಾಡಿದ್ದೇವೆ. ಭಾರತ ಮತ್ತು ಜರ್ಮನಿ ನಡುವಿನ ನಿಕಟ ಸಹಯೋಗವು ಇಡೀ ಜಗತ್ತಿಗೆ ಮುಖ್ಯವಾಗಿದೆ. ಬೆಳೆಯುತ್ತಿರುವ ವ್ಯಾಪಾರ ಮತ್ತು ಹೂಡಿಕೆ ಸಂಬಂಧಗಳು ನಮ್ಮ ಪಾಲುದಾರಿಕೆಗೆ ಹೊಸ ವೇಗವನ್ನು ತುಂಬಿವೆ. ನಮ್ಮ ದ್ವಿಪಕ್ಷೀಯ ವ್ಯಾಪಾರವು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ, ಹಲವಾರು ಜರ್ಮನ್ ಕಂಪನಿಗಳು ಭಾರತದಲ್ಲಿ ಹೂಡಿಕೆ ಮಾಡುತ್ತಿವೆ. ಮುಂದಿನ ದಿನಗಳಲ್ಲಿ ಆರ್ಥಿಕ ಸಂಪರ್ಕಗಳನ್ನು ಇನ್ನಷ್ಟು ಗಾಢವಾಗಿಸಲು ನಾವು ಬಯಸುತ್ತೇವೆ.”
ಮತ್ತೊಂದು ಪೋಸ್ಟ್ನಲ್ಲಿ, ಪ್ರಧಾನಿ ಮೋದಿ, “ಭಾರತ ಮತ್ತು ಜರ್ಮನಿ ನಡುವಿನ ಬಲವಾದ ಸಂಬಂಧವು ನಮ್ಮ ರಾಷ್ಟ್ರಗಳ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಮತ್ತು ಉತ್ತಮ ಭೂಮಿಗೆ ಕೊಡುಗೆ ನೀಡುತ್ತದೆ. ಇಂದಿನ ಫಲಿತಾಂಶಗಳು ನಮ್ಮ ರಾಷ್ಟ್ರಗಳ ನಡುವಿನ ಬಹುಮುಖಿ ಸಹಕಾರವನ್ನು ಪ್ರತಿಬಿಂಬಿಸುತ್ತವೆ.”
ಉಭಯ ದೇಶಗಳು ರಾಜತಾಂತ್ರಿಕ ಸಂಬಂಧಗಳ 75 ವರ್ಷಗಳು ಮತ್ತು ಭಾರತ-ಜರ್ಮನಿ ವ್ಯೂಹಾತ್ಮಕ ಪಾಲುದಾರಿಕೆಯ 25 ವರ್ಷಗಳನ್ನು ಆಚರಿಸುತ್ತಿರುವ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಆಹ್ವಾನದ ಮೇರೆಗೆ ಚಾನ್ಸಲರ್ ಮೆರ್ಜ್ ಎರಡು ದಿನಗಳ ಅಧಿಕೃತ ಭೇಟಿಗಾಗಿ ಮುಂಜಾನೆ ಭಾರತಕ್ಕೆ ಆಗಮಿಸಿದರು.
ಗುಜರಾತ್ ನಲ್ಲಿ ದಿನದ ಕಾರ್ಯಕ್ರಮಗಳ ಭಾಗವಾಗಿ, ಪ್ರಧಾನಿ ಮೋದಿ ಮತ್ತು ಚಾನ್ಸಲರ್ ಮೆರ್ಜ್ ಅವರು ಸಾಬರಮತಿ ನದಿಯ ದಡದಲ್ಲಿರುವ ಐತಿಹಾಸಿಕ ಗಾಂಧಿ ಆಶ್ರಮಕ್ಕೆ ಭೇಟಿ ನೀಡಿದರು








