ಕಲಬುರಗಿ : ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿರುವವರಿಗೆ ಸಿಹಿಸುದ್ದಿ ಸಿಕ್ಕಿದ್ದು, ಶೀಘ್ರವೇ 3 ಲಕ್ಷ ಹೊಸ ರೇಷನ್ ಕಾರ್ಡ್ ವಿತರಿಸಲಾಗುವುದು ಎಂದು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸುಮಾರು 2.5 ರಿಂದ 3 ಲಕ್ಷ ಹೊಸ ಪಡಿತರ ಚೀಟಿಗಳನ್ನು ಮುಂದಿನ ಒಂದೆರಡು ತಿಂಗಳಲ್ಲಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಜನವರಿ ಅಂತ್ಯದಿಂದ ಅಥವಾ ಮುಂದಿನ ತಿಂಗಳಿಂದ 5 ಕೆ.ಜಿ ಅಕ್ಕಿಯ ಬದಲಾಗಿ ತೊಗರಿ ಬೇಳೆ, ಸಕ್ಕರೆ, ಎಣ್ಣೆ ಮತ್ತು ಉಪ್ಪು ಒಳಗೊಂಡ ಪೌಷ್ಟಿಕ ಇಂದಿರಾ ಕಿಟ್ ವಿತರಣೆ ಆರಂಭವಾಗಲಿದೆ. 4.50 ಕೋಟಿ ಜನರಿಗೆ ಲಾಭ ಸಿಗಲಿದೆ ಎಂದು ಹೇಳಿದ್ದಾರೆ.








