ಹಾಸನ : ಹಾಸನದಲ್ಲಿ ಮತ್ತೆ ಕಾಡಾನೆ ಅಟ್ಟಹಾಸ ಮೆರೆದಿದ್ದು ಆನೆ ದಾಳಿಗೆ ಮಹಿಳೆ ಒಬ್ಬರು ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದ 40 ವರ್ಷದ ಶೋಭಾ ಸಾವನ್ನಪ್ಪಿದ್ದಾರೆ.
ಮಹಿಳೆಯ ಮೃತದೇಹ ಎತ್ತಲು ಬಿಡದೆ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಗ್ರಾಮಸ್ಥರು ಧರಣಿ ಮಾಡುತ್ತಿದ್ದಾರೆ. ಮೃತ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಅಂತ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.
ಇವತ್ತು ಬೆಳಿಗ್ಗೆ ಕಾಫಿ ತೋಟದಲ್ಲಿ ಕೆಲಸಕ್ಕೆ ಬಂದಿದ್ದಾಗ ಕಾಡಾನೆ ದಾಳಿ ಮಾಡಿದೆ. ಶೋಭಾ ಅವರನ್ನು ಬೆನ್ನಟ್ಟಿ ತುಳಿದು ಸಾಯಿಸಿದೆ. ಸ್ಥಳಕ್ಕೆ DFI ಸೌರಭ್ ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇದೆ ವೇಳೆ ಅಲ್ಲಿಯ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.








