ಮೈಸೂರು : ರಾಜ್ಯ ರಾಜಕಾರಣದಲ್ಲಿ ಇದೀಗ ಮತ್ತೊಂದು ಬೆಳವಣಿಗೆ ಆಗಿದ್ದು, ಇಂದು ರಾಹುಲ್ ಗಾಂಧಿ, ಮೈಸೂರಿನ ಮೂಲಕ ಕೇರಳಕ್ಕೆ ತೆರಳಿದ್ದರು. ಇದೀಗ ಕೇರಳದಿಂದ ವಾಪಸ್ ಆದಾಗ ಮೈಸೂರಿನ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿದ್ದು ತೀವ್ರ ಕುತೂಹಲ ಮೂಡಿಸಿದೆ.
ಹೌದು ಇಂದು ಮೈಸೂರಿನ ಏರ್ಪೋರ್ಟ್ ನಲ್ಲಿ ರಾಹುಲ್ ಗಾಂಧಿ ಜೊತೆಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಕೆಲವು ಕಾಲ ಚರ್ಚೆ ಮಾಡಿದ್ದಾರೆ. ಹಲವು ದಿನಗಳ ಬಳಿಕ ರಾಹುಲ್ ಗಾಂಧಿ ಜೊತೆಗೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಸಿದ್ದರಾಮಯ್ಯ ಜೊತೆಗೂ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಈ ವೇಳೆ ಡಿಕೆ ಶಿವಕುಮಾರ್ ಅವರಿಗೆ ರಾಹುಲ್ ಗಾಂಧಿ “ನಥಿಂಗ್ ಟೂ ವರಿ ಡಿಕೆ ಯು ವಿಲ್ ಕಾಲ್ ಟು ಡೆಲ್ಲಿ ಸೂನ್” ಎಂದು ಸಂದೇಶ ನೀಡಿದ್ದಾರೆ. ಹಾಗಾಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ರಾಹುಲ್ ಗಾಂಧಿ ಅವರ ಜೊತೆ ಯಾವ ವಿಚಾರವಾಗಿ ಚರ್ಚೆ ಮಾಡಿದ್ದಾರೆ ಎನ್ನುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.








