ಚಾಮರಾಜನಗರ : ಚಾಮರಾಜನಗರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ರಸ್ತೆ ತಿರುವಿನಲ್ಲಿ ಸರ್ಕಾರಿ ಬಸ್ ಗೆ ಬೈಕಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪೂರ್ಣಕೆರೆ ಬಳಿ ತಾಳಬೆಟ್ಟದ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಮೃತರನ್ನು ರಾಮೇಗೌಡನಹಳ್ಳಿಯ ಶಿವಪ್ಪ ಮತ್ತು ಸತೀಶ್ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಇಬ್ಬರ ಶವಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಪಘಾತದ ಕುರಿತು ರಾಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








