ಇ-ಸ್ವತ್ತು ತಂತ್ರಾಂಶದ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ ವತಿಯಿಂದ ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ.
ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅನುಷ್ಠಾನ ಮಾಡಿರುವುದರಿಂದ ಪ್ರಾರಂಭದಲ್ಲಿ ಸಾರ್ವಜನಿಕರ ಕರೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ (ಕಾಲ್ ಸೆಂಟರ್) ಸಂಖ್ಯೆ: 08539-221207) ಇದ್ದು, ಇ-ಸ್ವತ್ತು ತಂತ್ರಾಂಶ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ, ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಡ್ಡಾಯವಾಗಿ ಹಾಜರಾಗಲು ಈಗಾಗಲೇ ಸೂಚನೆ ನೀಡಲಾಗಿರುತ್ತದೆ. ಈ ಪ್ರಯುಕ್ತ ಇ-ಸ್ವತ್ತು ತಂತ್ರಾಂಶ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಜನವರಿ 12 ರಿಂದ 31ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ (ಶನಿವಾರ ಮತ್ತು ಭಾನುವಾರ ಹಾಗೂ ರಜೆ ದಿನಗಳನ್ನು ಹೊರತುಪಡಿಸಿ) ಹಾಜರಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.
ಇ-ಸ್ವತ್ತು ತಂತ್ರಾಂಶದ ಸಂಬಂಧ ಸಹಾಯವಾಣಿ (ಕಾಲ್ ಸೆಂಟರ್) ಸಿಬ್ಬಂದಿಗೆ ಮಾರ್ಗದರ್ಶನ ನೀಡಲು ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








