ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ನಡೆದಿದೆ.
ಭಾರತೀಪುರ ಬಳಿ ಭೀಕರ ರಸ್ತೆ ಅಪಘಾತ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಿಹಾನ್ (15) ರಾಹಿಲ್ (9) ಹಾಗೂ ಫಾತಿಮಾ (76) ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು. ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ಮದುವೆಗೆ ತೆರಳಿದ್ದರು. ಮದುವೆ ಮುಗಿಸಿಕೊಂಡು ಶೃಂಗೇರಿಗೆ ವಾಪಸ್ ಆಗುವ ವೇಳೆ ಅಪಘಾತ ಸಂಭವಿಸಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








