ಬಾಗಲಕೋಟೆ : ಬಾಗಲಕೋಟೆಯಲ್ಲಿ ಬೀದಿ ನಾಯಿ ದಾಳಿಗೆ ಇದೀಗ ಬಾಲಕಿ ಒಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾಳೆ. ನಾಯಿ ಕಚ್ಚಿ ಗಾಯಗೊಂಡಿದ್ದ 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಸಾವನಪ್ಪಿದ್ದಾಳೆ.
ಕಳೆದ ಡಿಸೆಂಬರ್ 27ರಂದು ಬಾಗಲಕೋಟೆ ನಗರದ ನವನಗರದಲ್ಲಿ ಅಲೈನ ಮೇಲೆ ಬೀದಿ ನಾಯಿ ದಾಳಿ ನಡೆಸಿತ್ತು. ಕಣ್ಣು ಮೂಗು ಮತ್ತು ಮುಖಕ್ಕೆ ಗಂಭೀರವಾಗಿ ಗಾಯಗಳಾಗಿತ್ತು. ತಕ್ಷಣ ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಲೈನ್ ಹಾಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೆ ಇಂದು ಅಲೈನ ಸಾವನ್ನಪ್ಪಿದ್ದಾಳೆ.
ಸಾರ್ವಜನಿಕರೇ ಗಮನಿಸಿ : ನಾಯಿ ಕಚ್ಚಿದಲ್ಲಿ ಕೂಡಲೇ ರೇಬಿಸ್ ಲಸಿಕೆ ಹಾಕಿಸಿರಿ
ಸಾಕಿದ ಅಥವಾ ಬೀದಿ ನಾಯಿ ಕಚ್ಚಿದಲ್ಲಿ, ಉಗುರಿನಿಂದ ಗಿರಿದರೆ, ನಮ್ಮ ಮೈಮೇಲೆ ಈಗಾಗಲೇ ಇರುವ ಗಾಯವನ್ನು ನಾಲಿಗೆಯಿಂದ ನೆಕ್ಕಿದರೆ ಏನೂ ಆಗುವುದಿಲ್ಲವೆಂದು ನಿರ್ಲಕ್ಷ್ಯ ವಹಿಸದೇ ನಾಯಿ ಕಚ್ಚಿದ ಜಾಗವನ್ನು ಸೋಪು ಮತ್ತು ನೀರಿನಿಂದ ತೊಳೆದು, ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೆರಳಿ ವೈದ್ಯರ ಸಲಹೆಯಂತೆ ಮಾರಣಾಂತಿಕವಾದ ರೇಬಿಸ್ ರೋಗ ತಡೆಗಟ್ಟುವ ಲಸಿಕೆ ಪಡೆಯಬೇಕು.
ರೇಬೀಸ್ ಸೋಂಕುಳ್ಳ ನಾಯಿ ಕಚ್ಚಿದಾಗ ರೇಬೀಸ್ ನಿರೋಧಕ ಚುಚ್ಚುಮದ್ದು ಪಡೆಯದಿದ್ದರೆ ಅಂತಹ ವ್ಯಕ್ತಿಯು ರೇಬೀಸ್ ಕಾಯಿಲೆಯ ಸೋಂಕಿಗೆ ಒಳಗಾಗಿ ರೋಗ ದೀರ್ಘವಾದಾಗ ಮರಣ ಸಂಭವಿಸಬಹುದು.








