ಚಿಕ್ಕಬಳ್ಳಾಪುರ : ಅಕ್ರಮವಾಗಿ ಕಟ್ಟಿದ್ದ ಬ್ಯಾನರ್ ತೆರವು ಮಾಡಿದ್ದಕ್ಕೆ ನಗರಸಭೆ ಆಯುಕ್ತೆಗೆ ಇದೀಗ ಜೀವಾ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ನಗರ ಸಭೆ ಆಯುಕ್ತೆ ಅಮೃತಾಗೌಡಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಣ ಬೆದರಿಕೆ ಹಾಕಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ದಲ್ಲಿ ನಡೆದಿದೆ.
ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಮೃತ ಗೌಡಗೆ ಪ್ರಾಣಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಾಜೇಗೌಡ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು, ನಗರ ಸಭೆ ಆಯುಕ್ತ ಅಮೃತಾಗೆ ಕರೆ ಮಾಡಿ ಅವಾಚ್ಯ ಶಬ್ದಗಳಿಂದ ನಿಧಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ರಸ್ತೆಯಲ್ಲಿ ಅಕ್ರಮವಾಗಿ ಕಟ್ಟಿದ ಬ್ಯಾನರ್ ತೆರವು ಮಾಡಿದ ಹಿನ್ನೆಲೆಯಲ್ಲಿ ಅವಾಜ್ ಹಾಕಿದ್ದಾನೆ ಎಂದು ಹೇಳಲಾಗುತ್ತಿದೆ.
ಚಪ್ಪಲಿಯಲ್ಲಿ ಹೊಡೆದು ದಂಗೆ ಎಬ್ಬಿಸುವುದಾಗಿ ಬೆದರಿಕೆ ಆರೋಪ ಕೇಳಿ ಬಂದಿದೆ ಶಾಸಕ ಬಿ.ಎನ್ ರವಿಕುಮಾರ್ ಕೂಡ ಅಶ್ಲೀಲ ಪದಗಳಿಂದ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಅಷ್ಟೆ ಅಲ್ಲದೆ ಪರೋಕ್ಷವಾಗಿ ಸಚಿವ ಡಾ.ಎಂಸಿ ಸುಧಾಕರ್ ಗು ನಿಂದನೆ ಮಾಡಿದ್ದಾನೆ ಕಾಂಗ್ರೆಸ್ ಮುಖಂಡನ ಬೆದರಿಕೆಗೆ ನಗರಸಭೆ ಸಿಬ್ಬಂದಿಗಳು ಭಯಭೀತರಾಗಿದ್ದಾರೆ.
ಈ ವಿಚಾರವಾಗಿ ನಗರಸಭೆ ಸಿಬ್ಬಂದಿಗಳು ಜಿಲ್ಲೆಯದ್ಯಂತ ಪ್ರತಿಭಟನೆ ಮಾಡುತ್ತಿದ್ದು, ಪೌರಕಾರ್ಮಿಕರು, ಅಧಿಕಾರಿಗಳು ಸ್ಥಳಕ್ಕೆ ರಾಜೀವ್ ಗೌಡ ಕ್ಷಮೆ ಕೇಳಬೇಕು ಬೆದರಿಕೆ ಹಾಕಿದ್ದ ರಾಜೀವ್ ಗೌಡ ವಿರುದ್ಧ ಆಕ್ರೋಶ ಹೊರಹಕಿದ್ದಾರೆ. ರಾಜೀವ್ ಗೌಡ ಭಾವಚಿತ್ರಕ್ಕೆ ಚಪ್ಪಲಿಯಲ್ಲಿ ಹೊಡೆದು ಕಿಡಿ ಕಾರಿದ್ದಾರೆ. ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಕ್ಷಮೆಯಾಚನೆಗೆ ಒತ್ತಾಯಿಸಿದ್ದಾರೆ.








